ನವದೆಹಲಿ: 370 ವಿಧಿ ರದ್ದುಗೊಳಿಸಿದ ಕೇಂದ್ರ ಸರಕಾರದ ಆದೇಶದ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯನ್ನು ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್, ಮಹತ್ವದ ತೀರ್ಪು ನೀಡಿದೆ.
ಕೇಂದ್ರದ ನಿರ್ಧಾರ ಸರಿಯಾಗಿಯೇ ಇದೆ. ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು ನಿರ್ಧಾರ ಸರಿ ಇದೆ. ಹಾಗಾಗಿ 2024ರ ಸೆಪ್ಟೆಂಬರ್ 30ರೊಳಗೆ ಚುನಾವಣೆ ನಡೆಸಬೇಕು. ಯಾವುದೇ ಕಾರಣಕ್ಕೂ ಚುನಾವಣೆ ವಿಳಂಬ ಮಾಡಬಾರದು. ಆದಷ್ಟು ಶೀಘ್ರದಲ್ಲಿ ರಾಜ್ಯದ ಸ್ಥಾನಮಾನ ಮರುಸ್ಥಾಪಿಸುವಂತೆ ಸುಪ್ರೀಂ ಸಾಂವಿಧಾನಿಕ ಪೀಠ ತನ್ನ ಆದೇಶದಲ್ಲಿ ತಿಳಿಸಿದೆ.
ಕಾಶ್ಮೀರದ ಲಡಾಖ್ ಪ್ರತ್ಯೇಕಗೊಳಿಸಿದ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಆದೇಶವನ್ನೂ ಎತ್ತಿ ಹಿಡಿದಿದೆ. 2019ರ ಮೇನಲ್ಲಿ ಲಡಾಖ್ ಅನ್ನು ಪ್ರತ್ಯೇಕಗೊಳಿಸಿ ಆದೇಶ ಹೊರಡಿಸಲಾಗಿತ್ತು.