ವಿದ್ಯಾರ್ಥಿಯ ಅತಿರೇಕ ವರ್ತನೆ : ಮಕ್ಕಳ ಪೋಷಕರಿಂದ ವಿದ್ಯಾರ್ಥಿಯ ವಿರುದ್ಧ ಪ್ರತಿಭಟನೆ

ಪುತ್ತೂರು: ವಿದ್ಯಾರ್ಥಿಯೊಬ್ಬನ ಕಿರುಕುಳ ಸಹಿಸದೆ ವಿದ್ಯಾರ್ಥಿಗಳ ಪೋಷಕರು ಶಾಲೆಯ 6ನೇ ತರಗತಿ ವಿದ್ಯಾರ್ಥಿಯೊಬ್ಬನ ವಿರುದ್ಧ ಪ್ರತಿಭಟನೆ ನಡೆಸಿದ ಘಟನೆ ಮೇನಾಲ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ನಡೆದಿದೆ.

ಶಾಲೆಯ 6ನೇ ತರಗತಿಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಯೊಬ್ಬನ ವಿರುದ್ದ ಮಕ್ಕಳ ಪೋಷಕರು ಒಂದಾಗಿ ಶಾಲಾ ಆವರಣದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಮಕ್ಕಳಿಗೆ ಹೊಡೆಯುವ ಅಧ್ಯಾಪಕರ ವಿರುದ್ಧ ಪೋಷಕರು ಪ್ರತಿಭಟನೆ ಮಾಡುವುದನ್ನು ಕೇಳಿದ್ದೇವೆ. ಆದರೆ ಇದು ಹಾಗಲ್ಲ ಬದಲಾಗಿ ಶಾಲೆಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಯೊಬ್ಬನ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತಿದೆ.



































 
 

ತುಂಟಾಟ, ಕೀಟಲೆ, ಪೋಕರಿತನದಿಂದ ಶಾಲೆಯಲ್ಲಿ ಇತರ ವಿದ್ಯಾರ್ಥಿಗಳ ಮೇಲಿನ ಅತಿರೇಕ ವರ್ತನೆಯಿಂದ ಬೇಸತ್ತು ಮಕ್ಕಳ ಪೋಷಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರಸ್ತುತ ಶಾಲೆಯಲ್ಲಿ 123 ವಿದ್ಯಾರ್ಥಿಗಳಿದ್ದು, ಎಲ್ಲಾ ವಿದ್ಯಾರ್ಥಿಗಳ ಹೆತ್ತವರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು, ವಿದ್ಯಾರ್ಥಿಯನ್ನು ಡಿಬಾ‌ರ್ ಮಾಡುವಂತೆ ಆಗ್ರಹಿಸಿದ್ದಾರೆ. ಇಲ್ಲವಾದಲ್ಲಿ ತಮ್ಮ ಮಕ್ಕಳನ್ನು ಶಾಲೆಯಿಂದ ಕರೆದೊಯ್ಯುವುದಾಗಿ ಹೇಳಿರುವ ಪ್ರತಿಭಟನಾ ನಿರತ ಪೋಷಕರು ಶಿಕ್ಷಣಾಧಿಕಾರಿಗಳು ಸ್ಥಳಕ್ಕೆ ಬಂದು ಸಮಸ್ಯೆ ಬಗೆಹರಿಸಿವಂತೆ ಆಗ್ರಹಿಸಿದ್ದಾರೆ.

ಶಿಕ್ಷಣಾಧಿಕಾರಿಗಳಿಗೆ ಮಾಹಿತಿ ನೀಡಲಾಗಿದ್ದು ಪ್ರತಿಭಟನೆ ಮುಂದುವರಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top