ಎನ್‌ಐಟಿಕೆ ಅಕ್ರಮ ಟೋಲ್‌ಗೇಟ್: ಪ್ರತಿಭಟಿಸಿದ್ದ 101 ಮಂದಿ ವಿರುದ್ಧ ಚಾರ್ಜ್ ಶೀಟ್!!

ಸುರತ್ಕಲ್: ರಾಷ್ಟ್ರೀಯ ಹೆದ್ದಾರಿ 66ರ ಎನ್‌ಐಟಿಕೆಯಲ್ಲಿ ಕಾರ್ಯಾಚರಿಸುತ್ತಿದ್ದ ಅಕ್ರಮ ಟೋಲ್‌ಗೇಟ್ ವಿರುದ್ಧ ಪ್ರತಿಭಟಿಸಿದ್ದ ಸುಮಾರು 101 ಮಂದಿ ಹೋರಾಟಗಾರರ ಮೇಲೆ ಸುರತ್ಕಲ್ ಪೊಲೀಸರು ಜಾರ್ಜ್ ಶೀಟ್ ಸಲ್ಲಿಸಿದ್ದಾರೆ. ಸೋಮವಾರ ಹಲವು ಹೋರಾಟಗಾರರ ಮೊಬೈಲ್‌ಗಳಿಗೆ ಮೆಸೇಜ್ ಮೂಲಕ ನ್ಯಾಯಾಲಯಕ್ಕೆ ಹಾಜರಾಗಲು ಸೂಚನೆ ನೀಡಲಾಗಿದೆ ಎಂದು ತಿಳಿದು ಬಂದಿದೆ.

2022ರ ನವೆಂಬರ್‌ನಲ್ಲಿ ಟೋಲ್‌ಗೇಟ್ ತೆರವು ಹೋರಾಟ ಸಮಿತಿ ಟೋಲ್ ಗೇಟ್‌ನ್ನು ತೆರವುಗೊಳಿಸುವ ಕುರಿತು ನೇರ ಕಾರ್ಯಾಚರಣೆಗೆ ಕರೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಸಾವಿರಾರು ಹೋರಾಟಗಾರರು ಪೊಲೀಸರ ಸರ್ಪಗಾವಲನ್ನು ಹಿಮ್ಮೆಟ್ಟಿಸಿ ಟೋಲ್ ಬೂತ್‌ಗೆ ಮುತ್ತಿಗೆ ಹಾಕಿದ್ದರು. ಈ ವೇಳೆ ಸುಮಾರು 250ಕ್ಕೂ ಅಧಿಕ ಹೋರಾಟಗಾರರನ್ನು ಪೊಲೀಸರು ಬಂಧಿಸಿದ್ದರು.

ಈ ಸಂಬಂಧ 2023ರ ಅಕ್ಟೋಬರ್ ತಿಂಗಳಲ್ಲಿ ಸುರತ್ಕಲ್ ಪೊಲೀಸರು ಮಂಗಳೂರು ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದು, ಪ್ರಕರಣದಲ್ಲಿ ಸುಮಾರು 250ಕ್ಕೂ ಹೆಚ್ಚಿನವರು ಹೋರಾಟದಲ್ಲಿ ಭಾಗಿಗಳಾಗಿದ್ದರು. ಈ ಪೈಕಿ ಘಟನಾವಳಿಯ ವೀಡಿಯೊ ಸಾಕ್ಷ್ಯದ ಆಧಾರದಲ್ಲಿ 101 ಮಂದಿಯ ಮೇಲೆ ಆರೋಪ ಪಟ್ಟಿ ಸಲ್ಲಿಸಲಾಗಿದೆ ಎಂದು ಪೊಲೀಸ್ ಮೂಲ ಮಾಹಿತಿ ನೀಡಿದೆ.





















































 
 

ಟೋಲ್‌ಗೇಟ್ ವಿರೋಧಿ ಹೋರಾಟ ಸಮಿತಿಯ ಸಂಚಾಲಕ ಮತ್ತು ಪ್ರಕರಣದ ಎ2 ಆರೋಪಿಯಾಗಿರುವ ಮುನೀರ್ ಕಾಟಿಪಳ್ಳ, ಅಪರಿಚಿತರ ಗುಂಪು ಎಂದು ಪ್ರಕರಣ ದಾಖಲಿಸಲಾಗಿತ್ತು. ಅಲ್ಲಿ ಯಾವುದೇ ಹಿಂಸಾಚಾರವಾಗಿಲ್ಲ. ಪ್ರಾಣ ಹಾನಿ ಸಂಭವಿಸಿಲ್ಲ. ಇದು ಚಾರ್ಜ್ ಶೀಟ್ ದಾಖಲಿಸುವ ಪ್ರಕರಣವೇ ಅಲ್ಲ. ಹಾಕಲೇಬೇಕೆಂದಿದ್ದರೆ, 10-15 ಮಂದಿ ಮುಖಂಡರ ಮೇಲೆ ದಾಖಲಿಸಬಹುದಿತ್ತು. ಆದರೆ, 101 ಮಂದಿ ಹೋರಾಟಗಾರ ಮೇಲೆ ಆರೋಪ ಪಟ್ಟಿ ಸಲ್ಲಿಸಿರುವುದು ಆಶ್ಚರ್ಯ ಮೂಡಿಸಿದೆ ಎಂದು ತಿಳಿಸಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top