ದಂಪತಿ ಆತ್ಮಹತ್ಯೆ!! | ನೇಣಿಗೆ ಕೊರಳೊಡ್ಡಿದ ರಂಗಿತರಂಗ ನಾಟಕ ಸಂಸ್ಥೆಯ ಸ್ಥಾಪಕ, ಸಮಾಜ ಸೇವಕ ಲೀಲಾಧರ ಶೆಟ್ಟಿ ದಂಪತಿ!

ಹೆಸರಾಂತ ಸಮಾಜ ಸೇವಕ, ಕಾಪು ರಂಗಿತರಂಗ ನಾಟಕ ಸಂಸ್ಥೆಯ ಸ್ಥಾಪಕ ಲೀಲಾಧರ ಶೆಟ್ಟಿ ಹಾಗೂ ಅವರ ಪತ್ನಿ ವಸುಂಧರಾ ಶೆಟ್ಟಿ ದಂಪತಿ ಜೊತೆಯಾಗಿ ಮನೆಯಲ್ಲೇ ಆತ್ಮಹತ್ಯೆ ಮಾಡಿರುವ ಆಘಾತಕಾರಿ ಘಟನೆ ಮಂಗಳವಾರ ರಾತ್ರಿ ನಡೆದಿದೆ.

ಒಂದೇ ಸೀರೆಯನ್ನು ನೇಣಾಗಿ ಬಳಸಿಕೊಂಡು, ಅದಕ್ಕೆ ದಂಪತಿ ಕೊರಳೊಡ್ಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.

ಸರಳ ಸಜ್ಜನ ವ್ಯಕ್ತಿಯಾಗಿದ್ದ ಲೀಲಾಧರ ಶೆಟ್ಟಿ ಅವರು ಒಂದು ಬಾರಿ ಕಾಪು ಕ್ಷೇತ್ರದಿಂದ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದರು. ಅತ್ಯುತ್ತಮ ನಾಟಕ ತಂಡ ಹೊಂದಿದ್ದರು. ಕಾಪು “ರಂಗಿತರಂಗ” ತಂಡದ ಯಜಮಾನ ಆಗಿ ಭಾರೀ ಜನಪ್ರಿಯತೆ ಪಡೆದಿದ್ದರು. ಅಶಕ್ತರ ನೆರವಿಗೆ ಧಾವಿಸುವ ಅವರು ಯಾವಾಗಲೂ ಸಮಾಜದ ಪರವಾಗಿ ಕಾಳಜಿ ಹೊಂದಿದ್ದರು. ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರ ಅತ್ಯಂತ ಆಪ್ತರಾಗಿದ್ದ ಅವರು ಕಾಪು ಬಂಟರ ಸಂಘದ ಮಾಜಿ ಅಧ್ಯಕ್ಷ, ಭಜನಾ ಮಂಡಳಿಯ ಸಂಚಾಲಕ, ಅತ್ಯುತ್ತಮ ನಟ ಮತ್ತು ನಿರ್ದೇಶಕ ಆಗಿದ್ದರು. ಇತ್ತೀಚೆಗಷ್ಟೇ ಹೊಸ ನಾಟಕ ರಚಿಸಿದ್ದ ಅವರು, ಪ್ರದರ್ಶನಕ್ಕೆ ಸಿದ್ಧತೆ ನಡೆಸಿಕೊಂಡಿದ್ದರು.



































 
 

ಬುಧವಾರ ಸಂಜೆ ಮೃತರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top