ಕಾಣಿಯೂರು: ಚಾರ್ವಾಕ ಸ.ಉ. ಹಿ.ಪ್ರಾ. ಶಾಲಾ ವಾರ್ಷಿಕೋತ್ಸವದ ಪ್ರಯುಕ್ತ ಶಾಲಾ ಪೋಷಕರ ಹಾಗೂ ಹಿರಿಯ ವಿದ್ಯಾರ್ಥಿಗಳ ಕ್ರೀಡಾಕೂಟ ನಡೆಯಿತು.
ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ರಾಮಣ್ಣ ಗೌಡ ಪೊನ್ನೆತ್ತಡಿ, ಉಪಾಧ್ಯಕ್ಷೆ ಸಾರಿಕಾ ದೇವರತ್ತಿಮಾರು, ಶಾಲಾ ಮುಖ್ಯಗುರು ಪಾರ್ವತಿ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಚಂದ್ರಶೇಖರ ಎರ್ಕ, ಕಾರ್ಯದರ್ಶಿ ಪರಮೇಶ್ವರ ಗೌಡ ಇಡ್ಯಡ್ಕ ಮೊದಲಾದವರು ಉಪಸ್ಥಿತರಿದ್ದರು.
ಪೋಷಕರು ಹಾಗೂ ಹಿರಿಯ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಭಾಗವಹಿಸಿದರು.
























