ಪುತ್ತೂರು: ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಳದ ನೂತನ ಆಡಳಿತ ಅಧಿಕಾರಿಯಾಗಿ ಪುತ್ತೂರು ಹೋಬಳಿಯ ಕಂದಾಯ ನಿರೀಕ್ಷಕ ಗೋಪಾಲ್ ಅವರು ಬುಧವಾರ ಅಧಿಕಾರ ಸ್ವೀಕರಿಸಿದ್ದಾರೆ.
ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಧಾಕರ ರಾವ್ ಆರ್ಯಾಪು ಅಧಿಕಾರ ಹಸ್ತಾಂತರ ಮಾಡಿದರು. ಆಡಳಿತ ಅಧಿಕಾರಿಯನ್ನು ಸ್ವಾಗತಿಸಿ ಗೌರವಿಸಲಾಯಿತು.
ನಿರ್ಗಮಿತ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಧಾಕರ ರಾವ್ ಅವರನ್ನು ಜೀರ್ಣೋದ್ಧಾರ ಸಮಿತಿ ವತಿಯಿಂದ ಅಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ ಶಾಲು ಹಾಕಿ ಗೌರವಿಸಿದರು.
ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ರಾಧಾಕೃಷ್ಣ ಬೋರ್ಕರ್, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ದಾಮೋದರ ರೈ ತೊಟ್ಲ, ವಿಠಲ ರೈ ಮೇರ್ಲ, ಜೀರ್ಣೋದ್ಧಾರ ಸಮಿತಿ ಕೋಶಾಧಿಕಾರಿ ಗಿರೀಶ್ ಕಿನ್ನಿಜಾಲ್, ಭರತ್ ರೈ ಕೈಕಾರ, ಸಿಬ್ಬಂದಿ ಚಂದ್ರಕಲಾ, ಮಹೇಶ್ ಕಿರಣ್ ಮಲಾರ್ ಉಪಸ್ಥಿತರಿದ್ದರು.