ಪುತ್ತೂರು : ಡಿ.27 ರಂದು ಎರಡು ಸ್ಥಾನಗಳಿಗೆ ನಡೆಯಲಿರುವ ನಗರಸಭಾ ಉಪಚುನಾವಣೆ ಅಂಗವಾಗಿ ಬಿಜೆಪಿ ಪಕ್ಷದಿಂದ ಅಭ್ಯರ್ಥಿಗಳ ಹೆಸರು ಅಂತಿಮವಾಗಿದೆ.
ಬಿಜೆಪಿಯಿಂದ ನಗರಸಭೆಯ ವಾರ್ಡ್ 1ರ ಅಭ್ಯರ್ಥಿಯಾಗಿ ಸುನೀತಾ ಹಾಗೂ ನಗರಸಭೆಯ ವಾರ್ಡ್ 11ರ ಅಭ್ಯರ್ಥಿಯಾಗಿ ರಮೇಶ್ ರೈ ಅವರನ್ನು ಆಯ್ಕೆ ಮಾಡಲಾಗಿದೆ
ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದ್ರೆ ರವರ ನೇತೃತ್ವದಲ್ಲಿ ರೋಟರಿ ಮನಿಷಾ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಅಭ್ಯರ್ಥಿಗಳ ಹೆಸರನ್ನು ಆಯ್ಕೆ ಮಾಡಲಾಗಿದೆ.
ನಗರ ಸಭೆಯ ವಾರ್ಡ್ 1 ರಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಶಿವರಾಮ ಸಪಲ್ಯ ಹಾಗೂ ವಾರ್ಡ್ 11ರಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯ ಶಕ್ತಿ ಸಿನ್ಹಾ ರವರ ನಿಧನದಿಂದ ತೆರವಾದ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.