ಸುಬ್ರಹ್ಮಣ್ಯ: ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಏನೆಕಲ್ಲು ಗ್ರಾಮದಲ್ಲಿ ನಡೆದಿದೆ.
ಕಡಬ ತಾಲೂಕಿನ ಏನೆಕಲ್ಲು ಗ್ರಾಮದ ಕುಕ್ಕಪ್ಪನ ಮನೆ ಮೋಹನ ಕುಮಾರ(51) ಆತ್ಮಹತ್ಯೆ ಮಾಡಿಕೊಂಡವರು.
ಇತ್ತೀಚೆಗೆ ಮನೆ ನಿರ್ಮಾಣಕ್ಕಾಗಿ ಕೈ ಸಾಲ ಹಾಗೂ ಕೃಷಿ ಚಟುವಟಿಕೆಗಳಿಗೆ ಬ್ಯಾಂಕು ಸಾಲಗಳನ್ನು ಮಾಡಿಕೊಂಡಿದ್ದರು ಎನ್ನಲಾಗಿದೆ. ಮಾಡಿದ ಸಾಲವನ್ನು ತೀರಿಸಲಾಗದೇ ಬೇಸರದಿಂದ ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.
ಮುಂಜಾನೆ ಎಂದಿನಂತೆ ತೋಟಕ್ಕೆ ಹೋದವರು ಎಷ್ಟು ಹೊತ್ತಾದರೂ ಮನೆಗೆ ಬಾರದೇ ಇದ್ದಾಗ ಮನೆಯವರು ತೋಟದಲ್ಲಿ ಹುಡುಕಾಡಿದಾಗ ಹಲಸಿನ ಮರವೊಂದಕ್ಕೆ ನೈಲಾನ್ ಹಗ್ಗದಿಂದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಈ ಕುರಿತು ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.