ರಿಯಲ್ ಎಸ್ಟೇಟ್ ಉದ್ಯಮಿಯಿಂದ ಹೂಡಿಕೆದಾರರಿಗೆ ಪಂಗನಾಮ
ಬೆಂಗಳೂರು: 500 ಕೋಟಿ ರೂ.ಗೂ ಅಧಿಕ ಮೊತ್ತದ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬಯಿಯ ಕರಣ್ ಗ್ರೂಪ್ ಬಿಲ್ಡರ್ಸ್ & ಡೆವಲಪರ್ಸ್ ಮುಖ್ಯಸ್ಥ ಮಹೇಶ್ ಬಿ.ಓಜಾ ಅವರನ್ನು ಗುರುವಾರ ಜಾರಿ ನಿರ್ದೇಶನಾಲಯ (ಇಡಿ)ದ ಅಧಿಕಾರಿಗಳು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.ನ್ಯಾಯಾಲಯ ಓಜಾ ಅವರನ್ನು 10 ದಿನಗಳ ಇಡಿ ಕಸ್ಟಡಿಗೆ ಒಪ್ಪಿಸಿದೆ.
ರಿಯಲ್ ಎಸ್ಟೇಟ್ ಯೋಜನೆಗಳಲ್ಲಿ ಹೂಡಿಕೆಯ ಹೆಸರಿನಲ್ಲಿ ಹಣ ಪಡೆದು ವಂಚಿಸಿದ ಆರೋಪದ ಮೇಲೆ ಓಜಾ ವಿರುದ್ಧ ಕರ್ನಾಟಕ ಪೊಲೀಸರು ಹಲವು ಎಫ್ಐಆರ್ಗಳನ್ನು ದಾಖಲಿಸಿದ್ದಾರೆ ಎಂದು ಇಡಿ ತಿಳಿಸಿದೆ.
ವಿವಿಧ ರಿಯಲ್ ಎಸ್ಟೇಟ್ ಯೋಜನೆಗಳಲ್ಲಿ ಹೋಡಿಕೆದಾರರು ಒಟ್ಟು 526 ಕೋಟಿ ರೂಪಾಯಿ ಹೂಡಿಕೆ ಮಾಡಿರುವುದು ತನಿಖೆಯಿಂದ ತಿಳಿದುಬಂದಿದೆ ಎಂದು ಇಡಿ ಅಧಿಕಾರಿಯೊಬ್ಬರು ಹೇಳಿದ್ದಾರೆ.