ವೀರಪ್ಪನ್‌ ಸಹಚರ ಜ್ಞಾನಪ್ರಕಾಶ್‌ ನಿಧನ | ಬಾಂಬ್‌ ಸ್ಪೋಟ ಪ್ರಕರಣದಲ್ಲಿ 29 ವರ್ಷ ಜೈಲಿನಲ್ಲಿದ್ದ ಆರೋಪಿ

ಪಾಲಾರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿ ಅನಾರೋಗ್ಯದ ಕಾರಣಕ್ಕೆ ಜಾಮೀನು ಪಡೆದು ಜೈಲಿನಿಂದ ಹೊರ ಬಂದ, ವೀರಪ್ಪನ್ ಸಹಚರ ಜ್ಞಾನಪ್ರಕಾಶ್ (69) ಕೊನೆಯುಸಿರೆಳೆದಿದ್ದಾರೆ.

1993ರಲ್ಲಿ ನಡೆದಿದ್ದ ಪಾಲಾರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಕಾಡುಗಳ್ಳ ವೀರಪ್ಪನ್, ಬಿಲವೇಂದ್ರನ್ ಸೈಮನ್, ಮೀಸೆಕಾರ ಮಾದಯ್ಯ ಅವರೊಂದಿಗೆ ಭಾಗಿಯಾಗಿದ್ದ ಆರೋಪದ ಮೇಲೆ ಮೈಸೂರಿನ ಟಾಡಾ ನ್ಯಾಯಾಲಯ 1997ರಲ್ಲಿ ಜ್ಞಾನಪ್ರಕಾಶ್‌ ಗೆ ಗಲ್ಲು ಶಿಕ್ಷೆ ವಿಧಿಸಿತ್ತು. 2014ರಲ್ಲಿ ಸುಪ್ರಿಂ ಕೋರ್ಟ್ ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಗೆ ಪರಿವರ್ತಿಸಿ ಆದೇಶಿಸಿತ್ತು.

ಈ ವೇಳೆ ಬೆಳಗಾವಿಯ ಹಿಂಡಲಗಾ ಹಾಗೂ ಮೈಸೂರು ಕಾರಾಗೃಹದಲ್ಲಿ 29 ವರ್ಷಗಳ ಜೈಲು ಶಿಕ್ಷೆ ಅನುಭವಿಸಿದ್ದ ಜ್ಞಾನಪ್ರಕಾಶ್‌ಗೆ ಮೂರು ವರ್ಷಗಳ ಹಿಂದೆ ಶ್ವಾಸಕೋಶ ಕ್ಯಾನ್ಸರ್‌ ಪತ್ತೆಯಾಗಿತ್ತು. ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರಿಗೆ ಮಾನವೀಯತೆ ಆಧಾರದ ಮೇಲೆ ಸುಪ್ರೀಂ ಕೋರ್ಟ್‌ 2022ರ ನ.26ರಂದು ಜಾಮೀನು ನೀಡಿತ್ತು.



































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top