ಉಳ್ಳಾಲ: ಬಸ್ ಚಾಲಕರೊಬ್ಬರು ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮೇಶ್ವರ ಸಮುದ್ರ ತೀರದಲ್ಲಿ ನಡೆದಿದೆ.
ಕೊಂಡಾಣ ಬೆಳರಿಂಗೆ ನಿವಾಸಿ ವೆಂಕಪ್ಪ ಶೆಟ್ಟಿ ಎಂಬವರ ಪುತ್ರ ಜಗದೀಶ್ (39) ಆತ್ಮಹತ್ಯೆ ಮಾಡಿಕೊಂಡವರು.
ಸ್ಟೇಟ್ ಬ್ಯಾಂಕ್ ಕಿನ್ಯಾ ನಡುವೆ ಚಲಿಸುವ ಸಿಟಿ ಬಸ್ ನಲ್ಲಿ ಚಾಲಕರಾಗಿದ್ದ ಜಗದೀಶ್ ಸೋಮೇಶ್ವರ ರುದ್ರಪಾದೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೃತ್ಯ ಎಸಗುವ ಮುನ್ನ ಸಮುದ್ರ ತೀರದಲ್ಲಿ ಬೈಕ್, ಪರ್ಸ್ ಚಪ್ಪಲಿಗಳನ್ನು ಇಟ್ಟು ಸಮುದ್ರಕ್ಕೆ ಹಾರಿದ್ದಾರೆ. ಅವಿವಾಹಿತರಾಗಿರುವ ಜಗದೀಶ್ ಅವರ ಪರ್ಸ್ನಲ್ಲಿ ಚಿನ್ನ ಅಡವಿಟ್ಟ ಚೀಟಿ, ಬ್ಯಾಂಕ್ ಖಾತೆಗೆ ಹಣ ವರ್ಗಾಯಿಸಿದ ಚೀಟಿಗಳು ಪತ್ತೆಯಾಗಿವೆ ಎಂದು ತಿಳಿದು ಬಂದಿದೆ.