ವಿವಾಹಿತ ಮಹಿಳೆಯೊಂದಿಗೆ ಯುವಕನ ಸಲುಗೆಯ ಫೋಟೋ ವೈರಲ್ | ಇಬ್ಬರೂ ಆತ್ಮಹತ್ಯೆಗೆ ಶರಣು

ಮೈಸೂರು:  ವಿವಾಹಿತ ಮಹಿಳೆಯೊಂದಿಗೆ ಯುವಕ ಸಲುಗೆ ಬೆಳೆಸಿದ ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದರಿಂದ ಭಯಗೊಂಡ ಮಹಿಳೆ ಹಾಗೂ ಯುವಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರು ಜಿಲ್ಲೆಯ ಹುಣಸೂರು ಪಟ್ಟಣದಲ್ಲಿ ಇಂದು ನಡೆದಿದೆ.

ಹುಣಸೂರು ಪಟ್ಟಣದ ಕಲ್ಕುಣಿಗೆ ನಿವಾಸಿಗಳಾದ ಶೃತಿ (28) ಹಾಗೂ ಮುರಳಿ (20) ಆತ್ಮಹತ್ಯೆ ಮಾಡಿಕೊಂಡವರು.

ವಿವಾಹಿತ ಮಹಿಳೆ ಜೊತೆ ಯುವಕ ಸಲುಗೆಯಿಂದ ಇದ್ದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​​ ಆಗಿದೆ. ಫೋಟೋ ಕಣ್ಣಿಗೆ ಬೀಳುತ್ತಿದ್ದಂತೆ ಮನನೊಂದ ಗೃಹಿಣಿ ಶೃತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶೃತಿ ಆತ್ಮಹತ್ಯೆ ಬೆನ್ನಲ್ಲೇ ಮುರಳಿ ಕೂಡ ನೇಣಿಗೆ ಶರಣಾಗಿದ್ದಾನೆ ಎನ್ನಲಾಗಿದೆ.



































 
 

ಎಲೆಕ್ಟ್ರಿಷಿಯನ್ ಕೆಲಸ ಮಾಡುತ್ತಿದ್ದ ಮುರಳಿ, ತಾನು ಶೃತಿ ಜೊತೆ ಇದ್ದ ಫೋಟೋವನ್ನು ಅಪ್​ಲೋಡ್ ಮಾಡಿ ​​​ಸ್ಟೇಟಸ್​ನಲ್ಲಿ ಇಟ್ಟುಕೊಂಡಿದ್ದ. ಈ ಫೋಟೋ ವೈರಲ್ ಆಗಿದೆ. ಬಳಿಕ ಇದು ಶೃತಿ ಹಾಗೂ ಮುರಳಿ ಮನೆಯವರಿಗೂ ಮುಟ್ಟಿದೆ. ಇದೇ ವಿಚಾರವಾಗಿ ಎರಡು ಕುಟುಂಬಗಳ ನಡುವೆ ಗಲಾಟೆ ಆಗಿದೆ. ಇದರಿಂದ ಹೆದರಿ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಹುಣಸೂರು ಪೊಲೀಸ್ ಠಾಣೆಯಲ್ಲಿ ಎರಡೂ ಕುಟುಂಬದವರು ಪರಸ್ಪರ ದೂರು ನೀಡಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top