ಪುತ್ತೂರು: ಮುಂದಿನ ಒಂದು ತಿಂಗಳೊಳಗೆ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 100 ೧೦೦ ಕೋಟಿ ರೂ. ವೆಚ್ಚದಲ್ಲಿ ವಿವಿಧ ಕಾಮಗಾರಿಗೆ ಶಿಲಾನ್ಯಾಸ ಕಾರ್ಯ ನಡೆಯಲಿದ್ದು, ಮುಂದಿನ ಐದು ವರ್ಷದೊಳಗೆ ಪುತ್ತೂರಿನ ಸಮಗ್ರ ಅಭಿವೃದ್ದಿಯಾಗುವುದರಲ್ಲಿ ಯಾವುದೇ ಸಂಶಯ ಬೇಡ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.
ಅವರು ಕಬಕ ಗ್ರಾಮದ ಮುರ ಪುಣ್ಯಕುಮಾರ್ ದೈವಸ್ಥಾನದ ನೂತನ ಕಾಂಕ್ರೀಟ್ ರಸ್ತೆಯನ್ನು ಉದ್ಘಾಟಿಸಿ ಮಾತನಾಡಿದರು.
ಕಳೆದ 27 ದಿನಗಳ ಹಿಂದೆ ಈ ರಸ್ತೆಗೆ ಶಿಲಾನ್ಯಾಸ ನಡೆಸಲಾಗಿದ್ದು, ರಸ್ತೆ ಶೀಘ್ರದಲ್ಲೇ ನಡೆಯಬೇಕು ಎಂಬ ಇಲ್ಲಿನ ಜನರ ಬೇಡಿಕೆಯಿತ್ತು ಅದರಂತೆ ಕಾಮಗಾರಿ ವೇಗದಲ್ಲಿ ನಡೆದಿದ್ದು ಉದ್ಘಾಟನೆಯೂ ನಡೆದಿದೆ. ಗ್ಯಾರಂಟಿ ಯೋಜನೆ ನೀಡಿದ ಕಾಂಗ್ರೆಸ್ ಸರಕಾರಕ್ಕೆ ಅಭಿವೃದ್ದಿ ಕಾಮಗಾರಿಗೆ ನೀಡಲು ಹಣವಿಲ್ಲ ಎಂದು ಬಿಜೆಪಿಯವರು ಸುಳ್ಳು ಪ್ರಚಾರ ಮಾಡುತ್ತಿರುವುದರ ನಡುವೆಯೇ ಕೋಟಿ ಕೋಟಿ ಅನುದಾನ ಕ್ಷೇತ್ರಕ್ಕೆ ಹರಿದು ಬರುತ್ತಿದೆ. ಚುನಾವಣೆಯ ಸಂದರ್ಭದಲ್ಲಿ ನೀಡಿದ್ದ ಎಲ್ಲಾ ಭರವಸೆಗಳನ್ನು ಈಡೇರಿಸುವ ಪಣ ತೊಟ್ಟಿದ್ದೇನೆ ಎಂದರು.
ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಡಾ. ರಾಜಾರಾಂ ಕೆ ಬಿ. ಮಾತನಾಡಿ, ಪುತ್ತೂರು ಶಾಸಕರು 7 ತಿಂಗಳಲ್ಲೇ ಉತ್ತಮ ಜನಮನ್ನಣೆಗಳಿಸಿದ್ದಾರೆ. ಬಡವರ ಪರ ಕೆಲಸ ಮಾಡುವ ಶಾಸಕರು ಪುತ್ತೂರನ್ನು ಭ್ರಷ್ಟಾಚಾರ ಮುಕ್ತ ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಪುತ್ತೂರು ಅಭೂತಪೂರ್ವವಾಗಿ ಅಭಿವೃದ್ದಿ ಹೊಂದಲಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ವಿಟ್ಲ ಉಪ್ಪಿನಂಗಡಿ ಬ್ಲಾಕ್ ಮಾಜಿ ಅಧ್ಯಕ್ಷ ಮುರಳೀಧರ್ ರೈ ಮಠಂತಬೆಟ್ಟು, ಯುವ ಕಾಂಗ್ರೆಸ್ ಅಧ್ಯಕ್ಷ ಫಾರೂಕ್ ಪೆರ್ನೆ, ಶ್ರೀಪ್ರಸಾದ್ ಪಾಣಾಜೆ, ಎನ್‌ಎಸ್‌ಯುಐ ರಾಜ್ಯ ಉಪಾಧ್ಯಕ್ಷ ಫಾರೂಕ್ ಬಾಯಬ್ಬೆ, ಎನ್‌ಎಸ್‌ಯುಐ ರಾಜ್ಯ ಕಾರ್ಯದರ್ಶಿ ಬಾತಿಷಾ ಅಳಕೆಮಜಲು, ಹಿಂದುಳದ ವರ್ಗದ ಅಧ್ಯಕ್ಷ ಮೋಹನ್ ಗುರ್ಜಿನಡ್ಕ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ನಝೀರ್ ಮಠ, ಅಕ್ರಮ ಸಕ್ರಮ ಸಮಿತಿಯ ಸದಸ್ಯರಾದ ರಾಮಣ್ಣ ಪಿಲಿಂಜ, ಕಾಂಗ್ರೆಸ್ ಪ್ರಮುಖರಾದ ಮುಕೇಶ್ ಕೆಮ್ಮಿಂಜೆ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.