ಕಾಫಿನಾಡಿನ ಪ್ರವಾಸಿ ತಾಣಗಳಿಗೆ ಇಂದಿನಿಂದ ಆರು ದಿನ ನಿರ್ಬಂಧ | ಯಾಕಾಗಿ ? ಇಲ್ಲಿದೆ ವಿವರ

ಚಿಕ್ಕಮಗಳೂರು: ಇಂದಿನಿಂದ 6 ದಿನಗಳ ಕಾಲ ಪಶ್ಚಿಮ ಘಟ್ಟಗಳ ಸಾಲಿನ ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ.

ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಗಾಳಿಕೆರೆ, ಮಾಣಿಕ್ಯಾಧಾರಾ ಸೇರಿದಂತೆ ಎಲ್ಲ ಪ್ರವಾಸಿ ತಾಣಗಳು ಬಂದ್ ಆಗಲಿವೆ. ಇಂದಿನಿಂದ ರಿಂದ ಡಿ.27 ರವರೆಗೆ 6 ದಿನಗಳ ಕಾಲ ಗಿರಿ ಭಾಗಕ್ಕೆ ಪ್ರವಾಸಿಗರಿಗೆ ನಿರ್ಬಂಧಿಸಲಾಗಿದೆ. ಡಿ.24, 25, 26ರಂದು ದತ್ತಪೀಠದಲ್ಲಿ ದತ್ತಜಯಂತಿ  ಸಂಭ್ರಮ ಹಿನ್ನೆಲೆ 20 ಸಾವಿರಕ್ಕೂ ಅಧಿಕ ಮಾಲಾಧಾರಿಗಳು ಆಗಮಿಸುವ ನಿರೀಕ್ಷೆಗಳಿವೆ. ಆದ್ದರಿಂದ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮವಾಗಿ ಪ್ರವಾಸಕ್ಕೆ ನಿರ್ಬಂಧ ಹೇರಿದೆ.

ಈ ಬಾರಿ ಗಿರಿ ಭಾಗದಲ್ಲಿ ಕ್ರಿಸ್ ಮಸ್ ಸೆಲೆಬ್ರೇಷನ್ ಮಾಡೋದಕ್ಕೂ ಸಾಧ್ಯವಿಲ್ಲ. ಆರು ದಿನಗಳ ಕಾಲ ಚಂದ್ರದ್ರೋಣ ಪರ್ವತಗಳ ಸಾಲಿನ ಪ್ರವಾಸಿ ತಾಣಗಳಿಗೆ ಸಾರ್ವಜನಿಕರಿಗೆ ನಿರ್ಬಂಧ ಹಾಕಲಾಗಿದೆ.



































 
 

ಟೂರಿಸ್ಟ್  ವೆಹಿಕಲ್, ಮಾಲಾಧಾರಿಗಳ ವಾಹನಗಳಿಂದ ಟ್ರಾಫಿಕ್ ಜಾಮ್ ಸಮಸ್ಯೆ ಆಗಬಾರದು ಎಂಬ ಕಾರಣಕ್ಕೆ ನಿರ್ಬಂಧ ಹಾಕಲಾಗಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top