ಕಡಬ: ಕ್ರೆಟಾ ಹಾಗೂ ಓಮ್ನಿ ಕಾರು ಡಿಕ್ಕಿ ಹೊಡೆದುಕೊಂಡ ಪರಿಣಾಮ ಓರ್ವ ಮೃತಪಟ್ಟು, ಹಲವರು ಗಂಭೀರ ಗಾಯಗೊಂಡ ಘಟನೆ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ಶನಿವಾರ ಮಧ್ಯಾಹ್ನ ನಡೆದಿದೆ.
ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಓಮ್ಮಿ ಹಾಗೂ ವಿರುದ್ಧ ದಿಕ್ಕಿನಿಂದ ತೆರಳುತ್ತಿದ್ದ ಕ್ರೆಟಾ ನಡುವೆ ಮರ್ಧಾಳ ಸಮೀಪದ ಅಳೇರಿ ಎಂಬಲ್ಲಿ ತಿರುವಿನಲ್ಲಿ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಗಂಭೀರ ಗಾಯಗೊಂಡ ಓರ್ವ ಮೃತಪಟ್ಟಿದ್ದು, ಹಲವರು ಗಾಯಗೊಂಡು ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ ಎಂದು ತಿಳಿದು ಬಂದಿದೆ.
ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.