ಪುತ್ತೂರು: “ಶ್ರೀಮ ಹಿಲ್ಸ್” ವಸತಿ ಬಡಾವಣೆಯ ಉದ್ಘಾಟನಾ ಸಮಾರಂಭ ಡಿ.31 ಭಾನುವಾರ ಪುತ್ತೂರು ಬಪ್ಪಳಿಗೆಯಲ್ಲಿ ನಡೆಯಲಿದೆ.
ಸಂಜೆ 5 ಗಂಟೆಗೆ ನಡೆಯುವ ಉದ್ಘಾಟನಾ ಸಮಾರಂಭವನ್ನು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕಲ್ಲಡ್ಕ ಪ್ರಭಾಕರ್ ಭಟ್ ಉದ್ಘಾಟಿಸಲಿದ್ದು, ಶಾಸಕ ಅಶೋಕ್ ಕುಮಾರ್ ರೈ ಸಮಾರಂಭದ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಸಂಸದ ನಳಿನ್ ಕುಮಾರ್ ಕಟೀಲ್, ಮಾಜಿ ಶಾಸಕ ಸಂಜೀವ ಮಠಂದೂರು, ನಗರಸಭಾ ಸದಸ್ಯ ಭಾಮಿ ಅಶೋಕ್ ಶೆಣೈ, ಸ್ವರ್ಣೋದ್ಯಮಿ ಬಲರಾಮ ಆಚಾರ್ಯ, ಕ್ಯಾಂಪ್ಕೋ ಮಾಜಿ ಅಧ್ಯಕ್ಷ ಎಸ್.ಆರ್.ರಂಗಮೂರ್ತಿ ಪಾಲ್ಗೊಳ್ಳಲಿದ್ದಾರೆ ಎಂದು ಪುತ್ತೂರು ಯು.ಆರ್.ಪ್ರಾಪರ್ಟಿಸ್ ಸಂಸ್ಥೆ ತಿಳಿಸಿದೆ.