ಕಡಬ: ಮನೆಯ ಮೇಲ್ಛಾವಣಿಯಿಂದ ಬಿದ್ದು ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಕಡಬದಲ್ಲಿ ನಡೆದಿದೆ.
ಆಲಂಕಾರು ಗ್ರಾಮದ ಬಾರ್ಕುಲಿ ನಿವಾಸಿ ಉದಯ ಕುಮಾರ್ (27) ಮೃತಪಟ್ಟ ಯುವಕ.
ಕಾಮಗಾರಿ ಸಂದರ್ಭ ನೂತನ ಮನೆಯ ಮೇಲ್ಛಾವಣಿಯಿಂದ ಇಳಿಯುತ್ತಿದ್ದ ಸಂದರ್ಭಆಯತಪ್ಪಿ ಕೆಳಗೆ ಬಿದ್ದ ಪರಿಣಾಮ ಕುತ್ತಿಗೆದೆ ಗಂಭೀರ ಗಾಯವಾಗಿತ್ತು. ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಶಸ್ತ್ರ ಚಿಕಿತ್ಸೆಗೊಳಪಡಿಸಲಾಯಿತು. ಬಳಿಕ ಹೆಚ್ಚಿಕ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.