ಧಾರವಾಡ: ಸಹಕಾರ ಸಂಘದ ಚುನಾವಣೆಯಲ್ಲಿ ಸ್ಪರ್ಥಿಸಿ ಸೋತ ಅಭ್ಯರ್ಥಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡದ ಮುರುಘಾ ಮಠದ ಬಳಿ ನಡೆದಿದೆ.
ವಿಶ್ವವಿದ್ಯಾನಿಲಯದ ಲೆಕ್ಕಪತ್ರ ವಿಭಾಗದ ಸೂಪರಿಂಟೆಂಡೆಂಟ್ ಚಂದ್ರಕಾತ್ ಸಾವಳಗಿ (55) ಆತ್ಮಹತ್ಯೆ ಮಾಡಿಕೊಂಡವರು.
ಚುನಾವಣೆ ಫಲಿತಾಂಶ ಬಂದ ಮೇಲೆ ಮನೆಗೆ ವಾಪಸ್ ಆಗಿದ್ದ ಅವರು ರಾತ್ರಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮೂರ್ನಾಲ್ಕು ದಿನಗಳಿಂದ ಮನೆ ಬಾಗಿಲು ತೆರೆಯದ ಕಾರಣ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದರು. ಪೊಲೀಸರು ಬಂದಿ ಬಾಗಿಲು ತೆರೆದಾಗ ಪ್ರಕರಣ ಬೆಳಕಿಗೆ ಬಂದಿದೆ ಎಂದು ತಿಳಿದು ಬಂದಿದೆ.