ಬಂಟ್ವಾಳ : ಪಾದಚಾರಿ ಯುವತಿಗೆ ಕಾರು ಡಿಕ್ಕಿಯಾದ ಪರಿಣಾಮ ಯುವತಿ ಗಂಭೀರ ಗಾಯಗೊಂಡ ಘಟನೆ ಗುರುವಾರ ತಡರಾತ್ರಿ ಬಿ.ಸಿ.ರೋಡು ಸಮೀಪದ ಪಚ್ಚಿನಡ್ಕದಲ್ಲಿ ನಡೆದಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ತೀವ್ರನಿಗಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವತಿ ಇದೀಗ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಸ್ಥಳೀಯ ನಿವಾಸಿ ಚೈತ್ರ (22 ) ಮೃತಪಟ್ಟ ಯುವತಿ.
ಮಂಗಳೂರಿನ ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿರುವ ಚೈತ್ರ ಅವರಿಗೆ ನಿಶ್ಚಿತಾರ್ಥ ನಡೆದು ಮದುವೆಗೆ ದಿನ ನಿಗದಿಯಾಗಿದೆ ಎಂದು ತಿಳಿದುಬಂದಿದೆ. ಸಂಜೆ ಕೆಲಸ ಬಿಟ್ಟು ಬಸ್ ನಿಂದ ಇಳಿದು ತಾಯಿ ಜೊತೆಗೆ ಮನೆಯ ಕಡೆಯ ತೆರಳುತ್ತಿದ್ದ ವೇಳೆ ಅಪಘಾತ ನಡೆದಿದೆ. ಅತೀ ವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದ ಸ್ವಿಪ್ಟ್ ಕಾರು ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾಳೆ. ಈ ಸಂದರ್ಭದಲ್ಲಿ ಖಾಸಗಿ ಕಾರ್ಯಕ್ರಮವೊಂದಕ್ಕೆ ತೆರಳುತ್ತಿದ್ದ ಟ್ರಾಫಿಕ್ ಪೋಲೀಸರು ಅವರ ಖಾಸಗಿ ವಾಹನದ ಮೂಲಕ ಗಾಯಳು ಚೈತ್ರಳನ್ನು ಆಸ್ಪತ್ರೆಗೆ ದಾಖಲಿಸಿದ್ದರು.
ಬಂಟ್ವಾಳ ಸಂಚಾರಿ ಪೋಲಿಸರು ಸ್ಥಳಕ್ಕೆ ಬೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದರು.