ಪುತ್ತೂರು: ಭೈರವೈಕ್ಯ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ 78ನೇ ಜಯಂತ್ಯೋತ್ಸವ ಸಂಸ್ಮರಣಾ ಸಮಿತಿ ನೇತೃತ್ವದಲ್ಲಿ ಜ. 22ರಂದು ಬೆಳಿಗ್ಗೆ 10.30ರಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರ ಮಾರು ಗದ್ದೆಯಲ್ಲಿ ಗುರುವಂದನೆ, ರಜತ ತುಲಾಭಾರ, ಗ್ರಂಥ ಬಿಡುಗಡೆ ಸಮಾರಂಭ ನಡೆಯಲಿದೆ.
ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ 78ನೇ ಜಯಂತ್ಯೋತ್ಸವ ಸಂಸ್ಮರಣೆ, ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರ ಪಟ್ಟಾಭಿಷೇಕ ದಶಮಾನೋತ್ಸವ ಹಿನ್ನೆಲೆಯಲ್ಲಿ ರಜತ ತುಲಾಭಾರ, ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ಅವರ ಮಹಾಪ್ರಬಂಧ ಸಂಸ್ಕೃತ – ಸಂಸ್ಕೃತಿಗೆ ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಕೊಡುಗೆ ಒಂದು ಅಧ್ಯಯನದ ಗ್ರಂಥ ಬಿಡುಗಡೆ ನಡೆಯಲಿದೆ.
ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯ ಭವ್ಯ ವೇದಿಕೆಯಲ್ಲಿ ನಡೆಯುವ ಸಮಾರಂಭದಲ್ಲಿ ಶ್ರೀ ಆದಿಚುಂಚನಗಿರಿ ಕ್ಷೇತ್ರದ ಪೀಠಾಧ್ಯಕ್ಷ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರು ಅನುಗ್ರಹ ಸಂದೇಶ ನೀಡಲಿದ್ದಾರೆ. ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಮಂಗಳೂರು ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ಉಪಸ್ಥಿತರಿರುವರು. ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಸಂಜೀವ ಮಠಂದೂರು ಅಧ್ಯಕ್ಷತೆ ವಹಿಸುವರು.
ಕರಂದ್ಲಾಜೆ, ಆರಗ, ಆರ್. ಅಶೋಕ್, ಎಚ್.ಡಿ.ಕೆ., ಡಿ.ಕೆ.ಶಿ, ಜಗ್ಗೇಶ್ ಭಾಗಿ:
ಸಮಾರಂಭದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಕಂದಾಯ ಸಚಿವ ಆರ್. ಅಶೋಕ್, ಗೃಹ ಸಚಿವ ಆರಗ ಜ್ಞಾನೇಂದ್ರ, ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ರಾಜ್ಯಸಭಾ ಸದಸ್ಯ ಜಗ್ಗೇಶ್, ಎಂ.ಎಲ್.ಸಿ. ಎಸ್.ಎಲ್. ಭೋಜೇಗೌಡ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ನಾರಾಯಣ ಗೌಡ, ಸಹಕಾರ ಸಚಿವ ಎಸ್.ಟಿ. ಸೋಮಶೇಖರ, ಅಬಕಾರಿ ಸಚಿವ ಕೆ. ಗೋಪಾಲಯ್ಯ, ಒಕ್ಕಲಿಗ ಸಂಘ ಅಧ್ಯಕ್ಷ ಬಾಲಕೃಷ್ಣ ಸಿ.ಎನ್., ವಿರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ, ಒಕ್ಕಲಿಗ ನಿಗಮ ಮಂಡಳಿ ಅಧ್ಯಕ್ಷ ಕೃಷ್ಣಪ್ಪ ಮುಖ್ಯಅತಿಥಿಯಾಗಿರುವರು.
ಗ್ರಂಥ ಅವಲೋಕನ:
ಸಾಹಿತಿ ಡಾ. ಎಸ್.ಎಸ್. ಸತ್ಯನಾರಾಯಣ ಅವರು ಸ್ವಾಮೀಜಿ ಬರೆದ ಗ್ರಂಥದ ಅವಲೋಕನ ಮಾಡಲಿದ್ದಾರೆ. ಮಾಜಿ ಸಚಿವ ಗಂಗಾಧರ ಗೌಡ, ಕೆವಿಜಿ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ ಗೌಡ, ರಾಜ್ಯ ಒಕ್ಕಲಿಗ ಸಂಘದ ಉಪಾಧ್ಯಕ್ಷ ಡಾ. ಕೆ.ವಿ. ರೇಣುಕಾ ಪ್ರಸಾದ್, ದ.ಕ. ಗೌಡ ವಿದ್ಯಾಸಂಘದ ಧನಂಜಯ ಅಡ್ಪಂಗಾಯ, ದ.ಕ. ಮತ್ತು ಕೊಡಗು ಗೌರ ಅಭಿವೃದ್ಧಿ ಸಂಘದ ನಿತ್ಯಾನಂದ ಮುಂಡೋಡಿ, ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ವಿಶ್ವನಾಥ ಗೌಡ, ಸುಳ್ಯ ಗೌಡರ ಯುವ ಸೇವಾ ಸಂಘ ಅಧ್ಯಕ್ಷ ಚಂದ್ರ ಕೊಲ್ಚಾರು, ಬೆಳ್ತಂಗಡಿ ಗೌಡ ಯಾನೆ ಒಕ್ಕಲಿಗ ಸೇವಾ ಸಂಘ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಮಂಗಳೂರು ಒಕ್ಕಲಿಗ ಗೌಡ ಸೇವಾ ಸಂಘ ಅಧ್ಯಕ್ಷ ಸದಾನಂದ ಗೌಡ ಡಿ.ಪಿ., ಬಂಟ್ವಾಳ ಒಕ್ಕಲಿಗ ಗೌಡ ಸೇವಾ ಸಂಘ ಅಧ್ಯಕ್ಷ ಮೋನಪ್ಪ ಗೌಡ ಬಿ., ಬೆಳ್ತಂಗಡಿ ಒಕ್ಕಲಿಗ ಸಂಘ ಅಧ್ಯಕ್ಷ ಬಾಲಕೃಷ್ಣ ಗೌಡ ಕೇರಿಮಾರ್, ಕಡಬ ಒಕ್ಕಲಿಗ ಸಂಘ ಅಧ್ಯಕ್ಷ ಸುರೇಶ್ ಬೈಲು, ಉಡುಪಿ ಒಕ್ಕಲಿಗ ಗೌಡರ ಸೇವಾ ಸಂಘದ ಅಧ್ಯಕ್ಷ ಡಿ.ಎಂ. ಸುರೇಶ್ ಗೌರವ ಉಪಸ್ಥಿತರಿರುವರು.
ಶಾಲಾ ಶಂಕುಸ್ಥಾಪನೆ, ಮೆರವಣಿಗೆ:
ಸಮಾರಂಭದ ದಿನ ಬೆಳಿಗ್ಗೆ 8ಕ್ಕೆ ಉಪ್ಪಿನಂಗಡಿ ಪೆರಿಯಡ್ಕದಲ್ಲಿ ಬಿಜಿಎಸ್ ಶಾಲೆಯ ಶಂಕುಸ್ಥಾಪನೆ ನೆರವೇರಲಿದೆ. ಬೆಳಿಗ್ಗೆ 9.30ಕ್ಕೆ ಪುತ್ತೂರಿನ ದರ್ಬೆ ವೃತ್ತದಿಂದ ಮಹಾಸ್ವಾಮೀಜಿ ಅವರ ಭವ್ಯ ಮೆರವಣಿಗೆ ನಡೆಯಲಿದೆ. ಮೆರವಣಿಗೆಯಲ್ಲಿ ಪುತ್ತೂರು, ಸುಳ್ಯ, ಮಂಗಳೂರು, ಕಡಬ, ಬಂಟ್ವಾಳ, ಬೆಳ್ತಂಗಡಿ ತಾಲೂಕು ಒಕ್ಕಲಿಗರ ಸಂಘಗಳಿಂದ ಭವ್ಯವಾದ ಆಕರ್ಷಣೀಯ ಟ್ಯಾಬ್ಲೋ ಮೆರವಣಿಗೆ ಇರಲಿದೆ. ಪೂರ್ಣಕುಂಭ, ಚಂಡೆವಾದ್ಯ, ಸಾಂಸ್ಕೃತಿಕ ಕುಣಿತ ಸಮಾರಂಭದ ಅಂದವನ್ನು ಹೆಚ್ಚಿಸಲಿದೆ ಎಂದು ಪ್ರಕಟಣೆ ತಿಳಿಸಿದೆ.