ಪುತ್ತೂರು: ಪುತ್ತೂರು ನಗರಸಭೆಯ ಉಪಚುನಾವಣೆಯಲ್ಲಿ ನೆಲ್ಲಿಕಟ್ಟೆ ವಾರ್ಡಿನಲ್ಲಿ ಬಿಜೆಪಿ ಬಹುಮತದೊಂದಿಗೆ ಗೆಲುವು ಸಾಧಿಸಿದ್ದು, ರಕ್ತೇಶ್ವರಿ ವಾರ್ಡಿನಲ್ಲಿ ಕೆಲವು ಮತಗಳ ಅಂತರದಿಂದ ಸೋಲು ಕಂಡಿದೆ.
ಈ ಕುರಿತು ಪ್ರತಿಕ್ರಿಯಿಸಿದ ಪುರಸಭೆ ಮಾಜಿ ಅಧ್ಯಕ್ಷ ರಾಜೇಶ್ ಬನ್ನೂರು, ಎರಡು ವಾರ್ಡುಗಳಲ್ಲಿ ಮತ ನೀಡಿ ಸಹಕರಿಸಿದವರಿಗೆ ಅಭಿನಂದನೆ ಸಲ್ಲಿಸಿ, ಬಿಜೆಪಿ ಯಾವುದೇ ವ್ಯಕ್ತಿಯ ಆಸ್ತಿ ಅಲ್ಲ. ಹಿರಿಯ ಕಾರ್ಯಕರ್ತರು ಕಟ್ಟಿ ಬೆಳೆಸಿದ ಪಾರ್ಟಿ, ಪಕ್ಷಕ್ಕೆ ಡ್ಯಾಮೇಜ್ ಆಗುವಂತೆ ಕೆಲವು ವ್ಯಕ್ತಿಗಳು ನಾವು ಮಾಡಿದ್ದು, ಅವರು ಮಾಡಿದ್ದು ಎಂದು ಹೇಳುತ್ತಿದ್ದಾರೆ. ಪಕ್ಷಕ್ಕೆ ಯಾರು ಡ್ಯಾಮೇಜ್ ಮಾಡುತ್ತಾರೋ ಅವರನ್ನು ಪಕ್ಷದಿಂದ ಒದ್ದು ಹೊರಗೆ ಹಾಕುವುದು ಒಳ್ಳೆಯದು ಎಂದು ಅವರು ತಿಳಿಸಿದ್ದಾರೆ.
ಕಾರ್ಯಕರ್ತರು ಕಟ್ಟಿ ಬೆಳೆಸಿದ ಪಕ್ಷವನ್ನು ಉಳಿಸಿ ಬೆಳೆಸುವುದು ನಮ್ಮ ಕರ್ತವ್ಯ.