ಮಾಣಿಲ: ವಿದ್ಯಾರ್ಥಿಗಳು ವಿದ್ಯೆಯೊಂದಿಗೆ ವಿನಯತೆಯನ್ನು ಬೆಳೆಸಿಕೊಳ್ಳಬೇಕು ಎಂದು ಹಿರಿಯ ಸಾಹಿತಿ ಸವಿತಾ ಭಟ್ ಅಡ್ಯಾಯಿ ಹೇಳಿದರು.
ಸರಕಾರಿ ಪ್ರೌಢ ಶಾಲೆ ಮಾಣಿಲದಲ್ಲಿ ನಡೆದ ಪ್ರತಿಭಾ ಪುರಸ್ಕಾರದ ಸಭಾ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿಎಂಸಿ ಅಧ್ಯಕ್ಷ ಶಿವಪ್ರಸಾದ್ ಸೊರಂಪಳ್ಳ ವಹಿಸಿ ಶಾಲೆಯ ಉನ್ನತಿಗೆ ಎಲ್ಲರ ಸಹಕಾರ ಕೋರಿದರು. ಮಾಣಿಲ ಗ್ರಾ.ಪಂ.ಅಧ್ಯಕ್ಷ ಶ್ರೀಧರ್ ಬಾಳೆಕಲ್ಲು ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿ ಶುಭ ಹಾರೈಸಿದರು.
ಗ್ರಾ.ಪಂ ಸದಸ್ಯ ರಾಜೇಶ್ ಕುಮಾರ್ ಬಾಳೆಕಲ್ಲು, ಶಾಲಾ ಸ್ಥಳದಾನಿ ಮುರುವ ನಡುಮನೆ ಮಹಾಬಲ ಭಟ್, ಎಸ್.ಡಿ. ಎ೦. ಸಿ ಸದಸ್ಯ ವಿಷ್ಣು ಕನ್ನಡಗುಳಿ , ಶಿಕ್ಷಕ ಭುವನೇಶ್ವರ್ ಸಿ. ಶುಭ ಹಾರೈಸಿದರು. ಪೆರುವಾಯಿ ಗ್ರಾ. ಪಂ. ಉಪಾಧ್ಯಕ್ಷೆ ಲಲಿತಾ, ಸರಕಾರಿ ನೌಕರರ ಸಂಘ ಬಂಟ್ಟಾಳ ಘಟಕದ ಅಧ್ಯಕ್ಷ ದೈ.ಶಿ. ಶಿಕ್ಷಕ ಉಮಾನಾಥ ರೈ ಉಪಸ್ಥಿತರಿದ್ದರು. ಮುಖ್ಯಶಿಕ್ಷಕಿ ಲತಾ ಯು. ಪ್ರಾಸ್ತಾವಿಕವಾಗಿ ಮಾತನಾಡಿದರು.
ಶಿಕ್ಷಕಿ ಕವಿತಾ ಸ್ವಾಗತಿಸಿದರು. ಶಿಕ್ಷಕ ಸುಧೀಶ್ ಕೆ. ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ಸಂದೇಶ್ ವಂದಿಸಿದರು. ಶಿಕ್ಷಕಿಯರಾದ ಮಮತಾ ರಾವ್, ಸೀತಾಲಕ್ಷ್ಮೀ ವರ್ಮ ಬಹುಮಾನ ವಿತರಣೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಿರ್ವಹಿಸಿದರು. ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.