ಸುಳ್ಯ: ಪುತ್ತೂರು ಉಪವಿಭಾಗದ ನೂತನ ಸಹಾಯಕ ಆಯುಕ್ತರಾಗಿ ಹಾಗೂ ದಂಡಾಧಿಕಾರಿಯಾಗಿರುವ ಜುಬಿನ್ ಮೊಹಪಾತ್ರ ಅವರು ಸುಳ್ಯಕ್ಕೆ ಭೇಟಿ ನೀಡಿದ ಸಂಧರ್ಭ ಗ್ರಾಮ ಪಂಚಾಯತ್ ಜಿಲ್ಲಾ ಒಕ್ಕೂಟದ ವತಿಯಿಂದ ಸ್ವಾಗತಿಸಲಾಯಿತು.
ಗ್ರಾಮ ಪಂಚಾಯತ್ ಜಿಲ್ಲಾ ಒಕ್ಕೂಟದ ಅಧ್ಯಕ್ಷರಾದ ಹರೀಶ್ ಉಬರಡ್ಕ ಅವರು ಸ್ಥಳೀಯ ಜನಪ್ರತಿನಿಧಿಗಳ ಪರವಾಗಿ ಸ್ವಾಗತಿಸಿದರು.
ಪುತ್ತೂರು, ಕಡಬ, ಸುಳ್ಯ ಹಾಗೂ ಬೆಳ್ತಂಗಡಿ ತಾಲೂಕು ವ್ಯಾಪ್ತಿಯ ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರಾಗಿರುವ ಜುಬಿನ್ ಮೊಹಪಾತ್ರ ಅವರು 2021ರ ಬ್ಯಾಚಿನ ಐ.ಎ.ಎಸ್. ಅಧಿಕಾರಿ.
























