ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಕಾಳಿಕಾಂಬಾ ಯಕ್ಷಗಾನ ಕಲಾ ಸೇವಾ ಸಂಘದ 50ನೇ ವರ್ಷದ ಪ್ರಯುಕ್ತ ಮಹಾಭಾರತ ಸರಣಿಯ ಪುರುಷಮೃಗ ತಾಳಮದ್ದಳೆ ಜರಗಿತು.
ಭಾಗವತರಾಗಿ ಪದ್ಮನಾಭ ಕುಲಾಲ್, ಡಿ.ಕೆ. ಆಚಾರ್ಯ ಅಲಂಕಾರು. ಹಿಮ್ಮೇಳದಲ್ಲಿ ದಿವಾಕರ ಆಚಾರ್ಯ ನೆರೆಂಕಿ, ಶ್ರೀಪತಿ ಭಟ್ ಉಪ್ಪಿನಂಗಡಿ, ಅರ್ಥಧಾರಿಗಳಾಗಿ ಜಯರಾಮ ಬಲ್ಯ (ಶ್ರೀ ಕೃಷ್ಣ), ಬಾಲಕೃಷ್ಣ ಕೇಪುಳು (ಧರ್ಮರಾಯ), ಗುಡ್ಡಪ್ಪ ಬಲ್ಯ (ಭೀಮ), ಜಯರಾಮ ಭಟ್ ದೇವಸ್ಯ (ಹನುಮಂತ), ಹರೀಶ ಆಚಾರ್ಯ ಬಾರ್ಯ (ಪುರುಷ ಮೃಗ), ಮಹಾಲಿಂಗೇಶ್ವರ ಭಟ್ ಪೆರಿಯಡ್ಕ (ಅರ್ಜುನ) ಭಾಗವಹಿಸಿದ್ದರು.
ಕಾರ್ಯಕ್ರಮದ ಪ್ರಾಯೋಜಕರಾಗಿ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಗುಡ್ಡಪ್ಪ ಬಲ್ಯ ಸಹಕರಿಸಿದರು. ಸಂಘದ ಅಧ್ಯಕ್ಷ ದಿವಾಕರ ಆಚಾರ್ಯ ಗೇರುಕಟ್ಟೆ ಕಾರ್ಯಕ್ರಮ ಸಂಯೋಜಿಸಿದ್ದರು.
























