ಪುತ್ತೂರು: ಪಡ್ಡಾಯೂರಿನ ಅಂಬೇಡ್ಕರ್ ವಸತಿ ಶಾಲೆಗೆ ಸ್ವಂತ ಕಟ್ಟಡ ಅಗತ್ಯವಿದ್ದು, ಹೊಸ ಕಟ್ಟಡ ನಿರ್ಮಾಣಕ್ಕೆ ಪ್ರಯತ್ನಿಸಲಾಗುವುದು ಎಂದು ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.
ಪಡ್ಡಾಯೂರಿನಲ್ಲಿರುವ ಉಪ್ಪಿನಂಗಡಿ ಅಂಬೇಡ್ಕರ್ ವಸತಿ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ವಸತಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುತ್ತಿದ್ದು, ಮಕ್ಕಳಿಗೆ ಶಿಕ್ಷಣದ ಜತೆ ಸಂಸ್ಕಾರದ ಶಿಕ್ಷಣವನ್ನು ನೀಡಬೇಕಾದ ಅಗತ್ಯವಿದೆ. ಇಲ್ಲಿನ ಶಿಕ್ಷಣ ಮತ್ತು ಇತರ ಸೌಲಭ್ಯಗಳು ಚೆನ್ನಾಗಿರುವ ಬಗ್ಗೆ ಪೋಷಕರು ತಿಳಿಸಿದ್ದಾರೆ ಎಂದ ಅವರು, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರತಿಭೆಗೆ ಅಭಿನಂದನೆ ಸಲ್ಲಿಸಿದರು.
ವೇದಿಕೆಯಲ್ಲಿ ಶಿಕ್ಷಕ-ರಕ್ಷಕ ಸಮಿತಿ ಅಧ್ಯಕ್ಷ ರವೀಂದ್ರ ರೈ, ಸಮಾಜ ಕಲ್ಯಾಣ ಇಲಾಖೆ ಮೆನೇಜರ್ ಕೃಷ್ಣ ಕುಮಾರ್, ಪ್ರಾಂಶುಪಾಲ ಸತೀಶ್ ಟಿ., ಮುಂಡಾಜೆ ಮೊರಾರ್ಜಿ ದೇಸಾಯಿ ವಸತಿ ಶಾಲಾ ಪ್ರಾಂಶುಪಾಲ ಮುರಳೀದರ್ ಜಿ., ಪುಂಜಾಲಕಟ್ಟೆ ಬ್ರಹ್ಮಶ್ರೀ ನಾರಾಯಣ ಗುರು ವಸತಿ ಶಾಲೆಯ ಪ್ರಾಂಶುಪಾಲ ಸಂತೋಷ್ ಕುಮಾರ್, ಎಸ್.ಜಿ.ಎಂ. ನಿವೃತ್ತ ಮುಖ್ಯಶಿಕ್ಷಕ ಶ್ರೀನಿವಾಸ, ಪುತ್ತೂರು ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ಅರುಣ್ ಕುಮಾರ್, ಸಿ.ಆರ್.ಪಿ. ಪ್ರಸಾದ್ ಮೊದಲಾದವರು ಉಪಸ್ಥಿತರಿದ್ದರು.
ಶಿಕ್ಣಕಿ ವಾಣಿ ಸ್ವಾಗತಿಸಿದರು.