ಜನೌಷಧ ಕೇಂದ್ರಕ್ಕೆ ಆಂಬುಲೆನ್ಸ್ ನುಗ್ಗಿದ ಘಟನೆ ಮಣಿಪಾಲದ ಲಕ್ಷ್ಮೀಂದ್ರ ನಗರದಲ್ಲಿ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ, ಘಟನೆ ನಡೆದಿದೆ ಎಂದು ಹೇಳಲಾಗಿದೆ. ಮಣಿಪಾಲದಿಂದ ಉಡುಪಿಯತ್ತ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ.
ಚಾಲಕನ ನಿಯಂತ್ರಣ ತಪ್ಪಿದ ಆಂಬುಲೆನ್ಸ್ ರಸ್ತೆ ಪಕ್ಕಕ್ಕೆ ಚಲಿಸಿದೆ. ನೇರವಾಗಿ ಜನೌಷಧ ಕೇಂದ್ರಕ್ಕೆ ಆಂಬುಲೆನ್ಸ್ ನುಗ್ಗಿದ್ದು, ಚಾಲಕ ಗಾಯಗೊಂಡಿದ್ದಾನೆ. ಜನೌಷಧ ಕೇಂದ್ರ ಸೇರಿದಂತೆ ಪಕ್ಕದ ಅಂಗಡಿಗೂ ಹಾನಿಯಾಗಿದೆ ಎಂದು ತಿಳಿದುಬಂದಿದೆ.