ಪುತ್ತೂರು: ನೂತನ ಸಹಾಯಕ ಆಯುಕ್ತರಾಗಿ ಹಾಗೂ ದಂಡಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿರುವ ಜುಬಿನ್ ಮೊಹಪಾತ್ರ ಅವರನ್ನು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವತಿಯಿಂದ ಸ್ವಾಗತಿಸಲಾಯಿತು.
ಸಹಾಯಕ ಆಯುಕ್ತರನ್ನು ಭೇಟಿಯಾದ ರಾಜ್ಯ ಸರಕಾರಿ ನೌಕರರ ಸಂಘದ ಪದಾಧಿಕಾರಿಗಳು ಸ್ವಾಗತಿಸಿ, ಸಂಘದ ಕ್ಯಾಲೆಂಡರ್ ಅನ್ನು ನೀಡಿದರು.
ಸಂಘದ ಅಧ್ಯಕ್ಷ ಶಿವಾನಂದ ಆಚಾರ್ಯ, ಕಾರ್ಯದರ್ಶಿ ಅಬ್ರಹಾಂ ಎಸ್.ಎ., ರಾಜ್ಯ ಪರಿಷತ್ ಸದಸ್ಯ ಪುರುಷೋತ್ತಮ ಬಿ., ಗೌರವಾಧ್ಯಕ್ಷ ರಾಮಚಂದ್ರ, ನಿಕಟಪೂರ್ವ ಅಧ್ಯಕ್ಷ ಮೌರಿಸ್ ಮಸ್ಕರೇನಸ್, ಕವಿತಾ, ಚಂದ್ರಶೇಖರ್, ಸುಲೋಚನ ಇನ್ನಿತರರು ಉಪಸ್ಥಿತರಿದ್ದರು.