ಪುತ್ತೂರು: ಭೈರವೈಕ್ಯ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಜಯಂತ್ಯೋತ್ಸವ ಸಂಸ್ಮರಣೆ ಹಿನ್ನೆಲೆಯಲ್ಲಿ ಮಹಾಲಿಂಗೇಶ್ವರ ಸಭಾಭವನ ಕಟ್ಟಡದಲ್ಲಿ ಜ. ೧೫ರಂದು ಕಾರ್ಯಾಲಯ ಉದ್ಘಾಟನೆಗೊಂಡಿತು.
ಆದಿಚುಂಚನಗಿರಿ ಸಂಸ್ಥಾನದ ಮಂಗಳೂರು ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ಅವರು ಕಾರ್ಯಾಲಯ ಉದ್ಘಾಟಿಸಿದರು. ಶಾಸಕ ಸಂಜೀವ ಮಠಂದೂರು, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ, ವ್ಯವಸ್ಥಾಪನಾ ಸಮಿತಿ ಸದಸ್ಯರು, ಜಯಂತ್ಯೋತ್ಸವ ಸಂಸ್ಮರಣಾ ಜಿಲ್ಲಾ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.