ಸುಬ್ರಹ್ಮಣ್ಯ: ಸುಮಾರು 4 ಸಾವಿರ ಅಡಿ ಎತ್ತರವಿರುವ ಕುಮಾರಪರ್ವತದ ತುತ್ತ ತುದಿಯಲ್ಲಿರುವ ಕುಮಾರನ ಪಾದಕ್ಕೆ ಮತ್ತು ಸಮೀಪದಲ್ಲಿರುವ ವಾಸುಕಿಗೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಧಾನ ಅರ್ಚಕ ಸೀತಾರಾಮ ಯಡಪಡಿತ್ತಾಯ ಅವರು ಮಂಗಳವಾರ ಪೂಜೆ ನೆರವೇರಿಸಿದರು.
ಈ ಸಂಧರ್ಭ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ, ವ್ಯವಸ್ಥಾಪನ ಸಮಿತಿ ಸದಸ್ಯರಾದ ಪ್ರಸನ್ನ ದರ್ಬೆ, ಶ್ರೀವತ್ಸ ಬೆಂಗಳೂರು, ಲೋಕೇಶ್ ಮುಂಡೋಕಜೆ, ಶೋಭಾ ಗಿರಿಧರ್, ದೇವಸ್ಥಾನದ ಸಿಬ್ಬಂದಿ ಉಪಸ್ಥಿತರಿದ್ದರು.
ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿಗಳು ಸೇರಿದಂತೆ 150ಕ್ಕೂ ಅಧಿಕ ಭಕ್ತರು ಕುಕ್ಕೆಯಿಂದ 18 ಕಿ.ಮೀ. ದೂರವಿರುವ ಎತ್ತರದ ಪರ್ವತ ಏರಿ ಪೂಜೆಯಲ್ಲಿ ಭಾಗವಹಿಸಿ ಪ್ರಸಾದ ಸ್ವೀಕರಿಸಿದರು.