ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ವಾಲಿಬಾಲ್ ಸಂಸ್ಥೆ ಆಶ್ರಯದಲ್ಲಿ ತಾಲೂಕು ವಾಲಿಬಾಲ್ ಸಂಸ್ಥೆ ಮತ್ತು ಸುದಾನ ವಸತಿಯುತ ವಿದ್ಯಾಸಂಸ್ಥೆಯ ಸಹಯೋಗದೊಂದಿಗೆ ಜಿಲ್ಲಾ ಮಟ್ಟದ ಶಾಲಾ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟ ‘ಜಿಲ್ಲಾ ಚಾಂಪಿಯಶಿಪ್-2023’ ಜ.6 ಶನಿವಾರ ಸುದಾನ ಶಾಲಾ ಮೈದಾನದಲ್ಲಿ ನಡೆಯಲಿದೆ ಎಂದು ದ.ಕ.ಜಿಲ್ಲಾ ವಾಲಿಬಾಲ್ ಸಂಸ್ಥೆಯ ಬಿ.ಎಸ್.ಸತೀಶ್ ಕುಮಾರ್ ತಿಳಿಸಿದ್ದಾರೆ.
ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ದ.ಕ. ಜಿಲ್ಲೆಯ ವಾಲಿಬಾಲ್ಆಟಗಾರರು ರಾಜ್ಯದಲ್ಲಿ ಮುಂದಿದ್ದು, ರಾಷ್ಟ್ರಮಟ್ದದಲ್ಲೂ ಮುಂಚೂಣಿಯಲ್ಲಿದ್ದಾರೆ, ಈಗಾಗಲೇ ಜಿಲ್ಲೆ 24ತಂಡಗಳು ನೋಂದಾಯಿಸಿಕೊಂಡಿದ್ದು, ಇನ್ನೂ ನೊಂದಾವಣೆಗೆ ಅವಕಾಶವಿದೆ. ಸುಮಾರು 600ಮಕ್ಕಳು ಭಾಗವಹಿಸಲಿದ್ದು, ನಾಲ್ಕು ಅಂಕಣದಲ್ಲಿ ಪಂದ್ಯಾಟ ನಡೆಯಲಿದೆ. ಎಲ್ಲರ ಭಾಗವಹಿಸುವಿಕೆ ಮುಖ್ಯವಾಗಿದ್ದು, ಉತ್ತಮ ಆಟಗಾರರ ಆಯ್ಕೆ ನಡೆಯಲಿದೆ ಎಂದು ತಿಳಿಸಿದರು.
ಬೆಳಿಗ್ಗೆ 9 ಗಂಟೆಗೆ ನಡೆಯುವ ಪಂದ್ಯಾಟದಲ್ಲಿ ಸವಣೂರು ವಿದ್ಯಾರಶ್ಮಿ ವಿದ್ಯಾಸಂಸ್ಥೆಯ ಸಂಚಾಲಕ ಸವಣೂರು ಸೀತಾರಾಮ ರೈ ದೀಪ ಬೆಳಗಿಸುವರು. ಶಾಸಕ ಅಶೋಕ್ ಕುಮಾರ್ ರೈ ಪಂದ್ಯಾಟ ಉದ್ಘಾಟಿಸುವರು. ಜಿಲ್ಲಾ ವಾಲಿಬಾಲ್ ಸಂಸ್ಥೆಯ ಅಧ್ಯಕ್ಷ ಬಿ.ಎಸ್.ಸತೀಶ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ವಿಧಾನ ಸಭಾ ಸಭಾಧ್ಯಕ್ಷ ಯು.ಟಿ.ಖಾದರ್ ಉಪಸ್ಥಿತರಿರುವರು.
ಮುಖ್ಯ ಅತಿಥಿಗಳಾಗಿ ಪುತ್ತೂರು ನಗರಸಭೆ ನಿಕಟಪೂರ್ವ ಅಧ್ಯಕ್ಷ ಜೀವಂಧರ್ ಜೈನ್, ಸುದಾನ ವಸತಿಯುತ ವಿದ್ಯಾಸಂಸ್ಥೆ ಸಂಚಾಲಕ ಫಾ.ವಿಜಯ ಹಾರ್ವಿನ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರವಿ ನಾಯ್ಕ, ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್, ಜನ ಜಾಗ್ರತಿ ವೇದಿಕೆಯ ಜಿಲ್ಲಾಧ್ಯಕ್ಷ ಪದ್ಮನಾಭ ಶೆಟ್ಟಿ, ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸುಂದರ ಗೌಡ, ಮಾಸ್ಟರ್ಸ್ ಅಥ್ಲೆಟಿಕ್ ಅಸೋಸಿಯೇಷನ್ ನ ಅಧ್ಯಕ್ಷ ಜಗದೀಶ್ ಶೆಟ್ಟಿ, ಮಂಗಳೂರು ಡಿ.ಎಫ್.ಒ. ಶ್ರೀಧರ್ ಪಾಲ್ಗೊಳ್ಳುವರು ಎಂದು ತಿಳಿಸಿದರು.
ಅಂದು ಸಂಜೆ ನಡೆಯಲಿರುವ ಪಂದ್ಯಾಟದ ಸಮಾರೋಪ ಸಮಾರಂಭಕ್ಕೆ ಅಧ್ಯಕ್ಷತೆಯನ್ನು ಪುತ್ತೂರು ವಾಲಿಬಾಲ್ ಸಂಸ್ಥೆಯ ಅಧ್ಯಕ್ಷ ಕಟ್ಟಾವು ಸತೀಶ್ ರೈ ಅಧ್ಯಕ್ಷತೆ ವಹಿಸಲಿದ್ದಾರೆ. ವಕೀಲ ಜಯಪ್ರಕಾಶ್ ರೈ ಬಹುಮಾನ ವಿತರಿಸುವರು. ಅತಿಥಿಗಳಾಗಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ನಿರ್ದೇಶಕ ಟಿ.ಜಿ.ರಾಜಾರಾಮ್ ಭಟ್, ನಗರ ಪೊಲೀಸ್ ಉಪಠಾಣಾಧಿಕಾರಿ ಆಂಜನೇಯ ರೆಡ್ಡಿ, ಉದ್ಯಮಿ ಸಹಜ್ ರೈ, ಸುದಾನ ಶಾಲೆ ಮುಖ್ಯ ಶಿಕ್ಷಕಿ ಶೋಭಾ ನಾಗರಾಜ್, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರದೀಪ್ ಡಿ’ಸೋಜ, ಕ್ರೀಡಾಧಿಕಾರಿ ಶ್ರೀಕಾಂತ್ ಪೂಜಾರಿ, ಗಣೇಶ್ ರೈ, ಪಿ.ಡಬ್ಲ್ಯೂ.ಡಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ರಾಧಾಕೃಷ್ಣ ನಾಯ್ಕ ಭಾಗವಹಿಸುವರು ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ದ. ಕ. ಜಿಲ್ಲಾ ವಾಲಿಬಾಲ್ ಸಂಸ್ಥೆ ಕಾರ್ಯದರ್ಶಿ ಶಂಕರ್ ಶೆಟ್ಟಿ ಪರಾರಿಗುತ್ತು, ಗೌರವಾಧ್ಯಕ್ಷ ವಿಜಯ ಹಾರ್ವಿನ್, ಪುತ್ತೂರು ಸಂಸ್ಥೆ ಅಧ್ಯಕ್ಷ ಕಟ್ಟಾವು ಸತೀಶ ರೈ, ಕಾರ್ಯದರ್ಶಿ ಬಾಬು ಮಾಸ್ತರ್ ಉಪಸ್ಥಿತರಿದ್ದರು.