ಪುತ್ತೂರು: ಸಮುದಾಯದ ಸಂಸ್ಕೃತಿ, ಸಂಸ್ಕಾರಗಳು ತನ್ನ ಚೌಕಟ್ಟಿನಲ್ಲಿ ಮುಂದುವರಿದಾಗ, ಹಿಂದೂ ಸಮಾಜ ಬಲಿಷ್ಠವಾಗಿ ಮುಂದುವರಿಯಲು ಸಾಧ್ಯ ಎಂದು ಆದಿಚುಂಚನಗಿರಿ ಮಹಾಸಂಸ್ಥಾನದ ಮಂಗಳೂರು ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ಹೇಳಿದರು.
ಆದಿಚುಂಚನಗಿರಿ ಮಹಾಸಂಸ್ಥಾನದ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ೭೮ನೇ ಜಯಂತ್ಯೋತ್ಸವ ಕಾರ್ಯಕ್ರಮಕ್ಕೆ ಪೂರ್ವಭಾವಿಯಾಗಿ ಭಾನುವಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆದ ಚಪ್ಪರ ಮುಹೂರ್ತಕ್ಕೆ ಚಾಲನೆ ನೀಡಿ ಮಾತನಾಡಿದರು.
ಹಿಂದೂ ಸಮಾಜ ಎನ್ನುವುದು ಒಂದು ವೃಕ್ಷ. ಸಮುದಾಯಗಳು ಅದರ ರೆಂಬೆಗಳಿದ್ದAತೆ. ಸಮುದಾಯಗಳ ಆಚಾರ – ವಿಚಾರವನ್ನು ಆಯಾ ಸಮಾಜದ ಸ್ವಾಮೀಜಿಗಳು, ಮುಂದಾಳುಗಳು ಮುನ್ನಡೆಸಿಕೊಂಡು, ಸಂರಕ್ಷಿಸಿಕೊAಡು ಹೋದಾಗ ಹಿಂದೂ ಸಮಾಜ ಬಲಿಷ್ಠಗೊಳ್ಳುತ್ತದೆ ಎಂದರು.
ಶಾಸಕ ಸಂಜೀವ ಮಠಂದೂರು, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ, ಜಯಂತ್ಯೋತ್ಸವ ಸಂಸ್ಮರಣಾ ಜಿಲ್ಲಾ ಸಮಿತಿ ಪ್ರಮುಖರು ಉಪಸ್ಥಿತರಿದ್ದರು.