ಪುತ್ತೂರು: ನಗರದ ಪರ್ಲಡ್ಕದ ಪಾಂಗಳಾಯಿ ಶ್ರೀ ಅರಸು ಮುಂಡ್ಯತ್ತಾಯ ದೈವಸ್ಥಾನದಲ್ಲಿ ವರ್ಷಾವಧಿ ಪೂಜೆ ಹಾಗೂ ದೈವಗಳ ನೇಮೋತ್ಸವ ಶನಿವಾರ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.
ಕೆಮ್ಮಿಂಜೆ ಬ್ರಹ್ಮಶ್ರೀ ಲಕ್ಷ್ಮೀಶ ತಂತ್ರಿಯವರ ನೇತೃತ್ವದಲ್ಲಿ ಬೆಳಗ್ಗೆಯಿಂದ ಶ್ರೀ ಮಹಾಗಣಪತಿ ಹೋಮ, ಕಲಶ ಪೂಜೆ, ನಾಗತಂಬಿಲ, ಪಂಚಾಮೃತ ಅಭಿಷೇಕ, ಶ್ರೀ ದೈವಗಳ ಕಲಶ ತಂಬಿಲ ಸೇವೆ, ಸಾಮೂಹಿಕ ಆಶ್ಲೇಷಬಲಿ ಪೂಜೆ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ನಡೆದು ಬಳಿಕ ಸಹಸ್ರಾರು ಮಂದಿಗೆ ಅನ್ನಸಂತರ್ಪಣೆ ಜರಗಿತು.
ಈ ಸಂದರ್ಭದಲ್ಲಿ ಪಾಂಗಳಾಯಿ ಶ್ರೀ ಅರಸು ಮುಂಡ್ಯತ್ತಾಯ ದೈವಸ್ಥಾನ ಸಮಿತಿ ಅಧ್ಯಕ್ಷ ತಾರನಾಥ ರೈ ಬಿ., ಉಪಾಧ್ಯಕ್ಷ ಪ್ರಶಾಂತ್ ಪಾಂಗಳಾಯಿ, ಖಜಾಂಚಿ ಜಯಶಂಕರ ರೈ ಕೆ., ಪ್ರಧಾನ ಕಾರ್ಯದರ್ಶಿ ಸೂರಪ್ಪ ಗೌಡ, ಸಮಿತಿ ಸದಸ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು.