ಪುತ್ತೂರು: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯೋರ್ವರು ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಶನಿವಾರ ನಡೆದಿದೆ.
ಬಲ್ನಾಡು ನಿವಾಸಿ ಕೇಸರಿ ಕೊಪ್ಪಳ (38) ಮೃತಪಟ್ಟವರು.
ಕೇಸರಿ ಕೊಪ್ಪಳ ಅವರು ಮನೆಯ ದಾಖಲೆ ಪತ್ರ ಇಟ್ಟು ಲೇವಾದೇವಿಯವರಿಂದ ಮೀಟರ್ ಬಡ್ಡಿಗೆ ಸಾಲ ಪಡೆದಿದ್ದರು. ಸಾಲ ಕೊಟ್ಟವರು ಕಿರುಕುಳ ನೀಡಿದ್ದಾರೆ ಹಲವರ ಬಳಿ ಹೇಳಿಕೊಂಡಿದ್ದರು. ಬಳಿಕ ನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಮಂಗಳೂರಿನ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದರು.
ಈ ಕುರಿತು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರಿಗೆ ಪತಿ, ಇಬ್ಬರು ಗಂಡು ಮಕ್ಕಳಿದ್ದಾರೆ ಎಂದು ತಿಳಿದು ಬಂದಿದೆ.