ಪುತ್ತೂರು: ನರಿಮೊಗರು ಕೊಡಂಕಿರಿ ಫೌಂಡೇಶನ್ ಪ್ರಾಯೋಜಿತ ಸರಸ್ವತಿ ವಿದ್ಯಾ ಮಂದಿರದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವರ್ಧಂತ್ಯುತ್ಸವ -2024 ‘ಪ್ರತಿಭಾ ಸರಸ್ವತೀ’ ಕಾರ್ಯಕ್ರಮ ಶನಿವಾರ ಸಂಜೆ ನಡೆಯಿತು.
ಮುಖ್ಯ ಅತಿಥಿಯಾಗಿ ಅಂಬಿಕಾ ಸಿಬಿಎಸ್‍ಇ ವಿದ್ಯಾಲಯದ ಪ್ರಾಂಶುಪಾಲೆ ಮಾಲತಿ ಡಿ. ಸಮಾರಂಭ ಉದ್ಘಾಟಿಸಿ ಮಾತನಾಡಿ, ಯಾವುದೇ ಮಗುವಿನ ಸಾಮರ್ಥ್ಯಕ್ಕೆ ಅನುಗುಣವಾಗಿ ಪ್ರೋತ್ಸಾಹ ನೀಡಬೇಕು. ಮಗುವಿನಲ್ಲಿ ಇಲ್ಲದೆ ಇರುವ ಕಲೆಯ ಬಗ್ಗೆ ಒತ್ತಡ ಹಾಗಬಾರದು. ಈ ನಿಟ್ಟಿನಲ್ಲಿ ಪ್ರತಿಭಾ ವೇದಿಕೆ ಮಕ್ಕಳಲ್ಲಿನ ಪ್ರತಿಭೆಯನ್ನು ತೋರ್ಪಡಿಸಲು ಸಹಕಾರಿಯಾಗಬಲ್ಲದು. ಇಂತಹಾ ವೇದಿಕೆಯಿಂದ ಮಕ್ಕಳು ಇನ್ನೊಬ್ಬರ ಸಾಧನೆ, ಕಲೆಯನ್ನು ಕಲಿತುಕೊಳ್ಳುತ್ತಾರೆ ಎಂದ ಅವರು, ಇದು ಜೀವನದ ಕಲೆಯಾಗಬೇಕೇ ಹೊರತು ಕೇವಲ ಬಹುಮಾನಕ್ಕೆ ಸೀಮಿತವಾಗಬಾರದು. ಜೀವನ ಕೌಶಲ್ಯ ಕಲೆಯನ್ನು ಕಲಿಸುವ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಮೈಲುಗಲ್ಲಾಗಿ ನಿಲ್ಲಲಿ ಎಂದರು.
ಇನ್ನೋರ್ವ ಮುಖ್ಯ ಅತಿಥಿ ನರಿಮೊಗರು ಸಿ.ಎ. ಬ್ಯಾಂಕ್ ಅಧ್ಯಕ್ಷ ನವೀನ್ ಡಿ. ಶುಭ ಹಾರೈಸಿದರು.
ಸಂಜೆ 5.00 ರಿಂದ ಸರಸ್ವತಿ ವಂದನಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿತು.
ರಾತ್ರಿ 8 ಗಂಟೆಗೆ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸರಸ್ವತಿ ವಿದ್ಯಾಮಂದಿರದ ಆಡಳಿತ ಮಂಡಳಿ ಅಧ್ಯಕ್ಷ ಅವಿನಾಶ ಕೊಡಂಕಿರಿ ವಹಿಸಿದ್ದರು.
ಈ ಸಂದರ್ಭದಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಲಕ್ಷ್ಮೀಶ ತೋಳ್ತಾಡಿ ಕೆಂಬ್ಲಾಜೆ ಅವರಿಗೆ ಗೌರವಾರ್ಪಣೆ ನಡೆಯಿತು. ಮುಖ್ಯ ಅತಿಥಿಗಳಾಗಿ ವಿವೇಕಾನಂದ ಪಾಲಿಟೆಕ್ನಿಕ್ ಅಧ್ಯಕ್ಷ ವಿಶ್ವೇಶ್ವರ ಭಟ್ ಬಂಗಾರಡ್ಕ ಶುಭ ಹಾರೈಸಿದರು. ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಶಿವನಾಥ ರೈ ಮೇಗಿನಗುತ್ತು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಭಾ ಕಾರ್ಯಕ್ರಮದ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.