ಕೊಯಂಬತ್ತೂರಿನ ಆದಿಯೋಗಿ ಮೂರ್ತಿಯ ತದ್ರೂಪು
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದಲ್ಲಿ 112 ಅಡಿ ಎತ್ತರದ ಆದಿಯೋಗಿ ಮೂರ್ತಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಅನಾವರಣಗೊಳಿಸಿದ್ದಾರೆ.
ತಮಿಳುನಾಡಿನ ಕೊಯಂಬತ್ತೂರಿನಲ್ಲಿರುವ ಜಗತ್ಪ್ರಸಿದ್ಧ ಆದಿಯೋಗಿಯ ಮೂರ್ತಿಯ ತದ್ರೂಪಿಯಂತೆ ಚಿಕ್ಕಾಬಳ್ಳಾಪುರದ ಆದಿಯೋಗಿ ಮೂರ್ತಿಯನ್ನು ಸದ್ಗುರು ಜಗ್ಗಿ ವಾಸುದೇವ್ ಅವರ ಈಶಾ ಫೌಂಡೇಶನ್ ನಿರ್ಮಿಸಿದೆ.
ಚಿಕ್ಕಬಳ್ಳಾಪುರ ತಾಲೂಕಿನ ಆವಲಗುರ್ಕಿ ವ್ಯಾಪ್ತಿಯ ಕೌರನಹಳ್ಳಿ ಬಳಿ 112 ಅಡಿ ಎತ್ತರದ ಆದಿಯೋಗಿ ಮೂರ್ತಿಯನ್ನು ನಿರ್ಮಿಸಲಾಗಿದೆ. ವಾರ ಪರ್ಯಂತ ನಡೆದ ಚಿಕ್ಕಬಳ್ಳಾಪುರ ಉತ್ಸವದಂಗವಾಗಿ ಮಕರ ಸಂಕ್ರಾಂತಿಯಂದು ಮೂರ್ತಿಯನ್ನು ಅನಾವರಣಗೊಳಿಸಿ ಸಾರ್ವಜನಿಕ ವೀಕ್ಷಣೆಗೆ ಅನುವು ಮಾಡಿಕೊಡಲಾಗಿದೆ. ಇದು ಕರ್ನಾಟಕದ ಇನ್ನೊಂದು ಪ್ರಮುಖ ಧಾರ್ಮಿಕ ಮತ್ತು ಪ್ರವಾಸಿ ಆಕರ್ಷಣೆಯಾಗಲಿದೆ ಎಂದು ಮೂರ್ತಿ ಅನಾವರಣಗೊಳಿಸಿ ಬೊಮ್ಮಾಯಿ ಹೇಳಿದ್ದಾರೆ.