ಪುತ್ತೂರು: ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಮಾತೃವಂದನಾ ಕಾರ್ಯಕ್ರಮದ ಅಂಗವಾಗಿ ಸಾಮೂಹಿಕ ಸೀಮಂತ ಕಾರ್ಯಕ್ರಮ ನಡೆಯಿತು.
ಕರ್ನಾಟಕ ರಾಜ್ಯ ಏಡ್ಸ್ ನಿಯಂತ್ರಣ ಸೊಸೈಟಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಂಗಳೂರು ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಘಟಕ ಹಾಗೂ ಪುತ್ತೂರು ತಾಲೂಕು ಆರೋಗ್ಯಾಧಿಕಾರಿ ಕಚೇರಿ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ 40 ಮಂದಿ ಗರ್ಭಿಣಿಯರಿಗೆ ಸೀಮಂತ ನಡೆಯಿತು.
ಪುತ್ತೂರು ತಾಲೂಕು ಆಸ್ಪತ್ರೆ ವೈದ್ಯಾಧಿಕಾರಿ ಡಾ.ಆಶಾ ಜ್ಯೋತಿ ಕಾರ್ಯಕ್ರಮ ಉದ್ಘಾಟಿಸಿದರು. ಡಾ.ಜಗದೀಶ್, ಡಾ.ಸ್ಮಿತಾರಾಣಿ, ಡಾ.ಅರ್ಚನಾ ಮಾಹಿತಿ ನೀಡಿದರು. ಐಸಿಟಿಸಿ ಕೌನ್ಸಲರ್ ತಾರನಾಥ ರೈ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.