ಸುಳ್ಯ: ಕಳೆದ ವಾರವಷ್ಟೇ ಸದ್ದು ಮಾಡಿದ ಬ್ಯಾನ್ ಹರಿದ ವಿಚಾರ ಮಾಸುವ ಮುನ್ನವೇ ಇದೀಗ ಮತ್ತೊಂದು ಅಯೋಧ್ಯೆ ಕಾರ್ಯಕ್ರಮಕ್ಕೆ ಶುಭಕೋರಿ ಹಾಕಿದ ಬ್ಯಾನರನ್ನು ಕಿಡಿಗೇಡಿಗಳು ಹರಿದು ಹಾಕಿದ ಘಟನೆ ಸುಳ್ಯ ತಾಲೂಕಿನ ಅಡ್ಕಾರು ಬಳಿ ಗುರುವಾರ ನಡೆದಿದೆ.
ಅಡ್ಕಾರು ಕಾರ್ತಿಕೇಯ ಯುವ ಸೇವಾ ಸಮಿತಿಯವರು ಜ.22 ರಂದು ಅಯೋಧ್ಯೆ ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಶುಭಕೋರಿ ಬ್ಯಾನರ್ ಅಳವಡಿಸಿದ್ದರು. ಬುಧವಾರ ರಾತ್ರಿ ಯಾರೋ ಕಿಡಿಗೇಡಿಗಳು ಬ್ಯಾನರ್ ನ ಮಧ್ಯಭಾಗವನ್ನು ಹರಿದು ಹಾಕಿದ್ದಾರೆ.
ಇದೀಗ ಈ ಘಟನೆಯಿಂದ ಆಕ್ರೋಶ ವ್ಯಕ್ತವಾಗುತ್ತಿದ್ದು, ಈ ಕುರಿತು ಸುಳ್ಯ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.