ನಾಳೆ ರಾಜ್ಯ ಸರಕಾರದ 5ನೇ ಗ್ಯಾರಂಟಿ ‘ಯುವನಿಧಿ’ ಯೋಜನೆಗೆ ಚಾಲನೆ | ಸಜ್ಜಾಗಿದೆ ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆಯ 5ನೇ ಗ್ಯಾರಂಟಿ ಘೋಷಣೆ ‘ಯುವ ನಿಧಿ’ ಯೋಜನೆಯಡಿ ಫಲಾನುಭವಿಗಳಿಗೆ ನಗದು ವರ್ಗಾವಣೆ ಕಾರ್ಯಕ್ರಮಕ್ಕೆ ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ಸಜ್ಜಾಗಿದೆ.

ಯುವಜನರ ಆಶಾಕಿರಣವಾದ ಸ್ವಾಮಿ ವಿವೇಕಾನಂದ ಜನ್ಮ ದಿನವಾದ ಜ.12 ಶುಕ್ರವಾರ ನಡೆಯುವ ಈ ಐತಿಹಾಸಿಕ ಸಮಾರಂಭಕ್ಕೆ ಶಿವಮೊಗ್ಗ ನಗರದ ಹೃದಯ ಭಾಗದಲ್ಲಿರುವ ಫ್ರೀಡಂ ಪಾರ್ಕ್ ನ ವಿಶಾಲವಾದ ಜಾಗದಲ್ಲಿ ಬೃಹತ್‌ ವೇದಿಕೆ ನಿರ್ಮಾಣವಾಗಿದೆ. 85 ಸಾವಿರಕ್ಕೂ ಜನರಿಗೆ ಆಸನಗಳ ವ್ಯವಸ್ಥೆ ಮಾಡಲಾಗಿದೆ.

ಡಿಪ್ಲೋಮಾ ಮತ್ತು ಪದವೀಧರ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ಉದ್ಯೋಗಭತ್ಯೆ ನೀಡುವ ಸರ್ಕಾರದ ಬಹತ್ವಾಕಾಂಕ್ಷಿಯ ಈ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್, ಸಚಿವರುಗಳಾದ ಮಧುಬಂಗಾರಪ್ಪ, ಡಾ.ಶರಣ ಪ್ರಕಾಶ್ ಪಾಟೀಲ್, ಡಾ.ಎಂ.ಸಿ. ಸುಧಾಕರ್ ಸೇರಿದಂತೆ ಶಾಸಕರು, ಅಧಿಕಾರಿಗಳು ಚಾಲನೆ ಕೊಡಲಿದ್ದಾರೆ.



































 
 

11 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದ್ದು, ಶಿವಮೊಗ್ಗ,ದಾವಣಗೆರೆ, ಚಿತ್ರದುರ್ಗಾ, ಚಿಕ್ಕಮಗಳೂರು, ಉಡುಪಿ ಳೂ ಹಾವೇರಿ ಜಿಲ್ಲೆಗಳಿಂದ ಸುಮಾರು 1 ಲಕ್ಷಕ್ಕೂ ಹೆಚ್ಚಿನ ಫಲಾನುಭವಿಗಳು ಹಾಗೂ ಅಷ್ಟೆ ಸಂಖ್ಯೆಯ ಜನರು ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮೊದಲ ಕಂತಿನ ಹಣವನ್ನು ಬಿಡುಗಡೆ ಮಾಡಲಾಗುತ್ತದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top