ಪುತ್ತೂರು: ತಾಲೂಕಿನ ಸರ್ವೆ ಗ್ರಾಮದ ಸೊರಕೆ ಎಂಬಲ್ಲಿ ಮನೆಯೊಂದಕ್ಕೆ ಬೆಂಕಿ ಬಿದ್ದ ಪರಿಣಾಮ ಸಂಪೂರ್ಣ ಭಸ್ಮವಾಗಿದೆ.
ಜ.9 ರಂದು ಈ ಘಟನೆ ನಡೆದಿದ್ದು, ಸೊರಕೆ ಪೆರಂಟೋಲು ನಿವಾಸಿ ಕುಂಡ ಎಂಬವರ ಟರ್ಪಾಲು ಹೊದಿಕೆಯ ಮನೆ ಬೆಂಕಿಯಿಂದ ಸಂಪೂರ್ಣ ಭಸ್ಮವಾಗಿದೆ ಎನ್ನಲಾಗಿದೆ.
ಮನೆಯಲ್ಲಿ ಕುಂಡ ಹಾಗೂ ಅವರ ಪುತ್ರ, ಸೊಸೆ ವಾಸಿಸುತ್ತಿದ್ದರು ಎನ್ನಲಾಗಿದ್ದು, ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡಿದ್ದು, ಬಟ್ಟೆ, ಪಾತ್ರೆ, ಮನೆಯ ದಾಖಲೆ ಪತ್ರ ಬೆಂಕಿಗೆ ಆಹುತಿಯಾಗಿದ್ದು, ಸುಮಾರು 1.5 ಲಕ್ಷ ರೂ. ನಷ್ಟ ಸಂಭವಿಸಿದೆ.
ಸ್ಥಳಕ್ಕೆ ಮುಂಡೂರು ಗ್ರಾಮ ಪಂ ಆಡಳಿತಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಎಂದು ತಿಳಿದು ಬಂದಿದೆ.