ಕಬಕ ವಿದ್ಯಾಪುರ ಅಂಗನವಾಡಿ ನೂತನ ಕಟ್ಟಡಕ್ಕೆ ಶಿಲಾನ್ಯಾಸ

ಪುತ್ತೂರು: ಸರಕಾರದಿಂದ ಬರುವ ಅನುದಾನವನ್ನು ಸಮಪ್ರಮಾಣದಲ್ಲಿ ಎಲ್ಲಾ ಗ್ರಾಮಗಳಿಗೂ ಹಂಚಿಕೆ ಮಾಡುವ ಮೂಲಕ ಪುತ್ತೂರು ವಿಧಾನಸಭಾ ಕ್ಷೇತ್ರದ ಸರ್ವಾಂಗೀಣ ಅಭಿವೃದ್ದಿ ಮಾಡಲಾಗುವುದು ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು.

ಅವರು ಕಬಕ ವಿದ್ಯಾಪುರ ಅಂಗನವಾಡಿಯ ನೂತನ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು.

ಶಿಥಿಲಾವಸ್ಥೆಯಲ್ಲಿದ್ದ ಈ ಅಂಗನವಾಡಿ ಕಟ್ಟಡಕ್ಕೆ ಅನುದಾನ ನೀಡುವಂತೆ ಸ್ಥಳೀಯರು ಮನವಿ ಮಾಡಿದ್ದರು. 13 ಲಕ್ಷ ರೂ. ವೆಚ್ಚದಲ್ಲಿ ಹೊಸ ಕಟ್ಟಡದ ಕಾಮಗಾರಿ ಮೂರು ತಿಂಗಳೊಳಗೆ ಪೂರ್ಣವಾಗಲಿದೆ. ಕಾಮಗಾರಿಯ ಗುಣಮಟ್ಟದ ಕುರಿತು ಗ್ರಾಮಸ್ಥರು ಎಚ್ಚರವಹಿಸಬೇಕು ಎಂದರು.



































 
 

ವಿಟ್ಲ ಉಪ್ಪಿನಂಗಡಿ ಬ್ಲಾಕ್ ಅದ್ಯಕ್ಷರಾದ ಡಾ. ರಾಜಾರಾಂ, ಕಬಕ ಗ್ರಾಪಂ ಸದಸ್ಯ ಸಾಬಾ ಮಾತನಾಡಿದರು. ಕಬಕ ವಲಯ ಅಧ್ಯಕ್ಷ ದಾಮೋದರ್ ಕಬಕ, ಬ್ಲಾಕ್ ಹಿಂದುಳಿದ ವರ್ಗಗಳ ಅಧ್ಯಕ್ಷ ಮೋಹನ್ ಗುರ್ಜಿನಡ್ಕ ,ಮೌಲಾ ಕಬಕ ಮೊದಲಾದವರು ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top