ಪುತ್ತೂರು: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗುತ್ತಿದ್ದು, ರಾಮ ಪ್ರತಿಷ್ಠೆಯಂದು ಹಳ್ಳಿ ಹಳ್ಳಿಗಳಲ್ಲಿ ಸಂಭ್ರಮ ಪಡಬೇಕು. ರಾಮ ಪ್ರತಿಷ್ಠೆಯಿಂದ ಮನುಷ್ಯನ ಜತೆ ಜೀವ ಸಂಕುಲಕ್ಕೂ ಒಳಿತಾಗಲಿದೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು.
ಅವರು ತೆಂಕಿಲದಲ್ಲಿ ಶ್ರೀರಾಮ ಕಥಾವೈಭವ ಸಾಂಸ್ಕೃತಿಕ ಸಮಿತಿ ಮತ್ತು ವಿವೇಕಾನಂದ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ವೈಭವದ ಅಯೋಧ್ಯೆಯ ಸಮಗ್ರ ಕಥನ ಶ್ರೀರಾಮ ಕಥಾವೈಭವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಬೆಂಗಳೂರು ಎಂ.ಆರ್. ಜಿ. ಗ್ರೂಪ್ ಅಧ್ಯಕ್ಷ ಕೆ. ಪ್ರಕಾಶ್ ಶೆಟ್ಟಿ ಮಾತನಾಡಿ , ರಾಮ ಶಕ್ತಿಯಾಗಿದ್ದು, ಆಂಜನೇಯ ಭಕ್ತಿಯನ್ನು ಜಗತ್ತಿಗೆ ತೋರಿಸಿದೆ. ರಾಮ ಮತ್ತು ಕೃಷ್ಣನ ಗ್ರಂಥಗಳು ಬದುಕಿನಲ್ಲಿ ಸದಾ ಉಳಿಯುವಂತಹದ್ದಾಗಿದೆ ಎಂದರು.
ಬರೋಡಾ ತುಳು ಸಂಘದ ಅಧ್ಯಕ್ಷ ಶಶಿಧರ ಶೆಟ್ಟಿ ಬರೋಡಾ, ಬಿಜೆಪಿ ದಕ್ಷಿಣ ಪ್ರಧಾನ ಕಾರ್ಯದರ್ಶಿ ವಿಜಯ ಶೆಟ್ಟಿ ಪಣಕಜೆ, ಉದ್ಯಮಿಗಳಾದ ಕಿಶೋರ್ ಆಳ್ವ, ಕಿರಣ್ ಚಂದ್ರ ಡಿ., ಸಿವಿಲ್ ಇಂಜಿನಿಯರ್ ಡಾ. ರವೀಶ್ ಪಡುಮಲೆ, ಮಂಗಳೂರು ಸಂಸದ, ಮಂಗಳೂರು ಶಾಸಕ ಡಾ. ವೈ ಭರತ್ ಶೆಟ್ಟಿ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಸುಳ್ಯ ಶಾಸಕಿ ಭಾಗೀರಥಿ ಮುರಳ್ಯ, ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೃಷ್ಣ ಭಟ್ ಕೆ. ಎಂ. ಮತ್ತಿತರರು ಉಪಸ್ಥಿತರಿದ್ದರು.
ಸಮಿತಿ ಅಧ್ಯಕ್ಷ ಕಿಶೋರ್ ಕುಮಾರ್ ಬೊಟ್ಯಾಡಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಧಾನ ಕಾರ್ಯದರ್ಶಿ ಎಸ್. ದಾಮೋದರ ಪಾಟಾಳಿ ವಂದಿಸಿದರು
ಬಳಿಕ ವಿವೇಕಾನಂದ ವಿದ್ಯಾ ಸಂಸ್ಥೆಗಳ ವಿದ್ಯಾರ್ಥಿಗಳಿಂದ ರಾಮಕಥಾ ವೈಭವ ನಡೆಯಿತು.