ಮಂತ್ರಾಕ್ಷತೆ ಹೆಸರಿನಲ್ಲಿ ಪುತ್ತಿಲ ಪರಿವಾರಕ್ಕೆ ಸುಳ್ಳು ಅಪವಾದ ಮಾಡಿರುವುದು ಖಂಡನೀಯ !

ಪುತ್ತೂರು: 500 ವರ್ಷಗಳಿಂದ ಹಿಂದೂ ಸಮಾಜ ಕಾತರದಿಂದ ಕಾಯುತ್ತಿರುವ ಅಮೋಘ ಕ್ಷಣ ಜ.22ರ ಅಯೋಧ್ಯೆಯ ಶ್ರೀ ರಾಮಮಂದಿರ ಪ್ರತಿಷ್ಠಾಪನೆ. ಈ ಸಂದರ್ಭದಲ್ಲಿ ಮುಂಡೂರು ಗ್ರಾಮದಲ್ಲಿ ನಡೆದ ಜಾಗದ ತಕರಾರಿಗೆ ಪುತ್ತಿಲ ಪರಿವಾರವನ್ನು ಅದರಲ್ಲೂ ಹಿಂದೂಗಳ ಪರಮಶ್ರೇಷ್ಠ ರಾಮಮಂದಿರದ ಮಂತ್ರಾಕ್ಷತೆಯನ್ನು ಬಳಸಿಕೊಂಡು ಸುಳ್ಳು ಅಪವಾದ ಮಾಡಿರುವುದು ತೀರ  ನೀಚ ಕೆಲಸ. ಇದನ್ನು ನಾವು ಖಂಡಿಸುತ್ತೇವೆ ಎಂದು ಪುತ್ತಿಲ ಪರಿವಾರ ಹೇಳಿದೆ.

ಮಂತ್ರಾಕ್ಷತೆ ವಿತರಿಸುವುದು ಸಹಿತ ರಾಮಮಂದಿರಕ್ಕೆ ಶುಭಕೋರಿ ಪುತ್ತೂರಿನಲ್ಲಿ ಪ್ರಪ್ರಥಮ 3ಡಿ ಬ್ಯಾನರ್ ಅಳವಡಿಸಿ ರಾಷ್ಟ್ರೀಯ ಹಬ್ಬದಂತೆ ಮನೆ ಮನೆಗಳಲ್ಲಿ ಆಚರಿಸಲು ಪುತ್ತಿಲ ಪರಿವಾರ  ರಾಮಮಂದಿರ ಪ್ರತಿಷ್ಠಾಪನೆಯನ್ನು ಆಚರಿಸಲು ಕಾಯುತ್ತಿದ್ದೇವೆ.

ಜಾಗದ ಗಲಾಟೆಗೆ ನಡೆದ ಘಟನೆ ಎಂದು ಪೊಲೀಸ್ ಎಫ್ಐಆರ್ ನಲ್ಲೇ ಉಲ್ಲೇಖ ಆಗಿದೆ. ತಕ್ಷಣ ಸ್ಪಷ್ಟಿಕರಣ ಕೊಟ್ಟು ಗೊಂದಲ ನಿವಾರಿಸಿದ ದಕ್ಷಿಣ ಕನ್ನಡ ಎಸ್ಪಿ ರಿಷ್ಶಂತ್ ಅವರಿಗೆ ಶ್ರೀರಾಮಚಂದ್ರನ ಪರಮಭಕ್ತರ ಪರವಾಗಿ ಅನಂತ ಅನಂತ ಧನ್ಯವಾದಗಳು.



































 
 

ದುರುದ್ದೇಶದಿಂದ ಸಮಾಜದಲ್ಲಿ ತಪ್ಪು ಅಭಿಪ್ರಾಯ, ತೇಜೋವಧೆ, ಧಾರ್ಮಿಕ ಭಾವನೆಗೆ ಧಕ್ಕೆ ತಂದು  ಪ್ರಕರಣವನ್ನು ತಿರುಚಿದವರ ವಿರುದ್ದ ತಕ್ಷಣ ಕಾನೂನು ಕ್ರಮ ಕೈಗೊಳ್ಳಬೇಕಾಗಿ ಹಿಂದೂ ಬಂಧುಗಳ ಪರವಾಗಿ ಪೊಲೀಸ್ ಇಲಾಖೆಗೆ ಪುತ್ತಿಲ ಪರಿವಾರ  ವಿನಂತಿ.ಮಾಡಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top