ಪುತ್ತೂರು: ಶಾಂತಿಗೋಡು ಗ್ರಾಮದ ಕೋಡಿ ಎಂಬಲ್ಲಿ ಮಂಗಳವಾರ ತಡರಾತ್ರಿ ಯಾರೋ ಕಿಡಿಗೇಡಿಗಳು ರಸ್ತೆ ಬದಿಯಲ್ಲಿ ತ್ಯಾಜ್ಯಗಳನ್ನು ತಂದು ಸುರಿದ ಪರಿಣಾಮ ಸ್ಥಳೀಯರು ಆಕ್ರೋಶಗೊಂಡಿದ್ದಾರೆ.
ಪಾರ್ಟಿ ನಡೆಸಿ ಬಳಿಕ ತಡರಾತ್ರಿ ತ್ಯಾಜ್ಯವನ್ನು ರಸ್ತೆ ಬದಿ ತಂದು ಸುರಿದಿರಬಹುದು ಎಂದು ಶಂಕೆ ವ್ಯಕ್ತವಾಗಿದೆ.
ತ್ಯಾಜ್ಯ ಬಹುತೇಕ ಪ್ಲಾಸ್ಟಿಕ್ ಬಾಟಲಿಗಳಿಂದ ಕೂಡಿದ್ದು, ಪೇಪರ್ ಪ್ಲೇಟ್, ಪ್ಲಾಸ್ಟಿಕ್ ಗ್ಲಾಸ್ ಇನ್ನಿತರ ಪದಾರ್ಥಗಳನ್ನು ಪ್ಲಾಸ್ಟಿಕ್ ಚೀಲಗಳಲ್ಲಿ ತಂದು ಸುರಿದಿದ್ದಾರೆ. ಗ್ರಾಪಂ ಕಾರ್ಯದರ್ಶಿ, ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.