ಪುತ್ತೂರು: ಕುಂಬ್ರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ರೈ ಅವರ ಪತ್ನಿ ಶುಭಲಕ್ಷ್ಮೀ ಮನೆ ಸಮೀಪದ ಕೃತಕ ನೀರಿನ ತೊಟ್ಟಿಗೆ ಬಿದ್ದು ಮೃತಪಟ್ಟ ಘಟನೆ ಬುಧವಾರ ನಡೆದಿದೆ.
ಮನೆ ಸಮೀಪದ ಗುಡ್ಡದ ಮೇಲಿರುವ ಟಾರ್ಪಾಲು ನಿರ್ಮಿತ ನೀರಿನ ತೊಟ್ಟಿಗೆ ಬಿದ್ದು ಮೃತಪಟ್ಟಿದ್ದಾರೆ. ಘಟನೆ ಕುರಿತಂತೆ ಸಾರ್ವಜನಿಕ ವಲಯದಲ್ಲಿ ಕಾಲು ಜಾರಿ ಬಿದ್ದಿರುವುದೋ ಅಥವಾ ಆತ್ಮಹತ್ಯೆಯೇ ಎಂಬ ಶಂಕೆ ಮೂಡಿದ್ದು, ಸರಿಯಾದ ಮಾಹಿತಿ ತಿಳಿದು ಬಂದಿಲ್ಲ ಎನ್ನಲಾಗಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.