ಪುತ್ತೂರು: ಶಿಕ್ಷಣ ಇಲಾಖೆ, ಪುತ್ತೂರು ಸರಕಾರಿ ಪ್ರೌಢಶಾಲೆ ಹಾಗೂ ಎಸ್.ಆರ್.ಕೆ. ಲ್ಯಾಡರ್ಸ್ ಸಂಯುಕ್ತ ಆಶ್ರಯದಲ್ಲಿ ಎಸ್.ಆರ್.ಕೆ. ಲ್ಯಾಡರ್ಸ್‍ನ ಬೆಳ್ಳಿಹಬ್ಬ ಸಂಭ್ರಮದ ಪ್ರಯುಕ್ತ ತಾಯಂದಿರ ಸಭೆ, ಸೈಬರ್ ಕ್ರೈಂ ಹಾಗೂ ಆರೋಗ್ಯ ಕುರಿತು ಮಾಹಿತಿ ಕಾರ್ಯಾಗಾರ ಜ.20 ಶನಿವಾರ ನೆಲ್ಲಿಕಟ್ಟೆ ಡಾ.ಕೆ.ಶಿವರಾಮ ಕಾರಂತ ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಲಿದೆ.
ಬೆಳಿಗ್ಗೆ 10.30 ಕ್ಕೆ ನಡೆಯುವ ಕಾರ್ಯಕ್ರಮವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್. ಉದ್ಘಾಟಿಸಲಿದ್ದು, ಶಾಲಾ ಎಸ್‍ಡಿಎಂಸಿ ಅಧ್ಯಕ್ಷ ದಿನೇಶ್ ಕಾಮತ್ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಶಾಲಾ ಮುಖ್ಯ ಶಿಕ್ಷಕಿ ಜಲಜಾಕ್ಷಿ ಕೆ.ಎಂ., ತಾಲೂಕು ಆರೋಗ್ಯ ಕೇಂದ್ರದ ಪ್ರಸೂತಿ ತಜ್ಞೆ ಡಾ.ಅರ್ಚನಾ ಕಾವೇರಿ, ಸಿಸಿಐ ಅಧಿಕಾರಿ ಪ್ರಣೀತಾ ಕೆ.ಎಸ್., ಎಸ್.ಆರ್.ಕೆ.ಲ್ಯಾಡರ್ಸ್ ಮಾಲಕರಾದ ಕೇಶವ ಎ. ಭಾಗವಹಿಸಲಿದ್ದಾರೆ ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.