ಪುತ್ತೂರು: ಕಲ್ಲಾರೆ ಶ್ರೀಗುರು ರಾಘವೇಂದ್ರ ಮಠದಲ್ಲಿ ಶ್ರೀ ರಾಮಲಲ್ಲಾನ ಪ್ರತಿಷ್ಠಾಪನೆಯ ಸಂಭ್ರಮವನ್ನು ಶ್ರೀ ಗುರುಗಳ ವಿಶೇಷ ಪೂಜೆಯೊಂದಿಗೆ ನೆರವೇರಿಸಲಾಯಿತು.
ಶ್ರೀ ಗುರುರಾಘವೇಂದ್ರ ಮಠದ ಆವರಣದಲ್ಲಿ ಎಲ್ ಇಡಿ ಸ್ಕ್ರೀನ್ ಅಳವಡಿಸಿ ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಶ್ರೀರಾಮನ ಪ್ರತಿಷ್ಠಾಪನೆಯನ್ನು ನೇರ ಪ್ರಸಾರದ ಮೂಲಕ ವೀಕ್ಷಿಸಲು ವ್ಯವಸ್ಥೆ ಮಾಡಲಾಗಿತ್ತು.
ಈ ಸಂದರ್ಭಲದಲ್ಲಿ ಸುಮಾರು 500 ಕ್ಕೂ ಮಿಕ್ಕಿ ಭಕ್ತಾದಿಗಳು ಪಾಲ್ಗೊಂಡಿದ್ದರು. ಬಳಿಕ ವಿಶೇಷ ಪೂಜೆ ನಡೆದ ಬಳಿಕ ಅನ್ನಸಂತರ್ಪಣೆ ನಡೆಯಿತು.
























