ಪುತ್ತೂರು: ಅಯೋಧ್ಯೆಯಲ್ಲಿ ಶ್ರೀ ರಾಮನ ಪ್ರಾಣ ಪ್ರತಿಷ್ಠೆ ಪ್ರಯುಕ್ತ ಕೋಡಿಂಬಾಡಿ ಗ್ರಾಮಸ್ಥರ ಹಾಗೂ ಪುತ್ತೂರಿನ ಸಮಸ್ತ ನಾಗರಿಕರ ಪರವಾಗಿ ಶಾಸಕ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಮಠಂತಬೆಟ್ಟುಶ್ರೀ ಮಹಿಷಮರ್ಧಿನಿ ದೇವಿಗೆ ಪುಷ್ಪ ಸಮರ್ಪಿಸಿದರು.
ಬಳಿಕ ಮಾತನಾಡಿದ ಶಾಸಕರು, ದೇಶದಲ್ಲಿ ಎಲ್ಲಾ ಧರ್ಮಿಯರು ಪರಸ್ಪರ ಸಹೋದರತೆಯಿಂದ ಬಾಳ್ವೆ ನಡೆಸುವ ಮೂಲಕ ದೇಶ ,ಜಗತ್ತಿನಲ್ಲಿ ಶಾಂತಿ ನೆಲಸುವಂತಾಗಲಿ ಎಂದರು.
ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ನಿರಂಜನ್ ರೈ ರೈ ಮಠಂತಬೆಟ್ಡು, ಮುರಳೀಧರ್ ರೈ ಮಠಂತಬೆಟ್ಟು, ಯೋಗೀಶ್ ಸಾಮಾನಿ, ನಿಹಾಲ್ ಶೆಟ್ಟಿ ಕಲ್ಲಾರೆ , ದೇವಸ್ಥಾನದ ವ್ಯವಸ್ಥಾಪಕ ಸಂತೋಷ್ ರೈ, ವಾರಿಸೇನ ಜೈನ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.