ಪುತ್ತೂರು: ಪುತ್ತೂರಿನ ವೈದ್ಯ ಡಾ.ಸುರೇಶ್ ಪುತ್ತೂರಾಯ ಅವರು ಮಧುಮೇಹ ಜಾಗೃತಿ-2024 ರಾಷ್ಟ್ರ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಾರ್ವಜನಿಕ ಭಕ್ತಾದಿಗಳ ಅನುಕೂಲಕ್ಕಾಗಿ ಪ್ರತಿ ತಿಂಗಳು ನಡೆಸುತ್ತಿರುವ ಉಚಿತ ವೈದ್ಯಕೀಯ ಶಿಬಿರದ ಮೂಲಕ ಅವರು ರಾಷ್ಟ್ರ ಮಟ್ಟದಲ್ಲಿ ಗುರುತಿಸಲ್ಪಟ್ಟಿದ್ದಾರೆ.
ಶಿಬಿರದ ಮೂಲಕ ಮಧುಮೇಹ ತಪಾಸಣೆಯಲ್ಲಿ ನೀಡಿದ ಅದ್ವಿತೀಯ ಸೇವೆ ಹಾಗೂ ಜನರಲ್ಲಿ ಆರೋಗ್ಯ ಜಾಗೃತಿಗಾಗಿ ಈ ಶಿಬಿರದ ರೂವಾರಿಯಾಗಿರುವ ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿರುವ ಡಾ.ಸುರೇಶ್ ಪುತ್ತೂರಾಯ ಮಧುಮೇಹ ಜಾಗೃತಿ-2024 ರಾಷ್ಟ್ರ ಪ್ರಶಸ್ತಿಗೆ (Diabetes Awareness Initiative Award-2024) ಭಾಜನರಾಗಿದ್ದಾರೆ.
ಜ.25ರಂದು ಒಡಿಸ್ಸಾದ ಭುವನೇಶ್ವರದಲ್ಲಿ ನಡೆದ ಡಯಾಬಿಟೀಸ್ ಇಂಡಿಯಾ 14ನೇ ವಿಶ್ವ ಸಮ್ಮೇಳನದಲ್ಲಿ ಡಾ.ಸುರೇಶ್ ಪುತ್ತೂರಾಯ ಅವರು ಪ್ರಶಸ್ತಿ ಸ್ವೀಕರಿಸಿದರು.