ಮಹಾಲಿಂಗೇಶ್ವರ ಸಂಜೀವಿನಿ ಒಕ್ಕೂಟದ ಮಹಾಸಭೆ

ಪುತ್ತೂರು: ಮುಂಡೂರು ಮಹಾಲಿಂಗೇಶ್ವರ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದ 2022-23ನೇ ಸಾಲಿನ ವಾರ್ಷಿಕ ಮಹಾಸಭೆ ಮುಂಡೂರು ಸಮುದಾಯ ಭವನದಲ್ಲಿ ನಡೆಯಿತು.

ಒಕ್ಕೂಟದ ಅಧ್ಯಕ್ಷೆ ಭಾರತಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಚಂದ್ರಶೇಖರ, ಉಪಾಧ್ಯಕ್ಷೆ ಯಶೋಧ , ಗ್ರಾಮ ಪಂಚಾಯಿತಿ ಸದಸ್ಯ ಉಮೇಶ್, ಕಾರ್ಯದರ್ಶಿ ಸೂರಪ್ಪ ಪಾಲ್ಗೊಂಡಿದ್ದರು.

ವಲಯ ಮೇಲ್ವಿಚಾರಕಿ ನಮಿತಾ ವಾರ್ಡ್ ಒಕ್ಕೂಟ ಮತ್ತು ಗ್ರಾಮ ಪಂಚಾಯಿತಿ ಒಕ್ಕೂಟದ ಕಾರ್ಯವೈಖರಿ, ಸಿಬ್ಬಂದಿಗಳ ಕುರಿತು ಮಾಹಿತಿ ನೀಡಿದರು. ಕಾರ್ಯದರ್ಶಿ ಮಮತಾ ಲೆಕ್ಕಪತ್ರ ಮಂಡಿಸಿದರು.



































 
 

ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳಾದ ಭವಾನಿ, ರಾಧಿಕಾ ಪ್ರಾರ್ಥಿಸಿದರು. ಸಮುದಾಯ ಸಂಪನ್ಮೂಲ ವ್ಯಕ್ತಿ ರಾಧಿಕಾ ಸ್ವಾಗತಿಸಿ, ಶ್ರೀದುರ್ಗಾ ಸ್ತ್ರೀ ಶಕ್ತಿ ಸ್ವ ಸಹಾಯ ಸಂಘದ ಸದಸ್ಯೆ ಚೈತ್ರಾ ಕಾರ್ಯಕ್ರಮ ನಿರೂಪಿಸಿದರು, ಭವಾನಿ ವಂದಿಸಿದರು. ಕಾರ್ಯಕ್ರಮದಲ್ಲಿ ಒಕ್ಕೂಟದ ಸಿಬ್ಬಂದಿಗಳು, ಸ್ವ ಸಹಾಯ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top