ಪುತ್ತೂರು: ಪುತ್ತಿಲ ಪರಿವಾರದ ವತಿಯಿಂದ ಸಮಾಲೋಚನಾ ಸಮಾವೇಶ ಫೆ.5 ಸೋಮವಾರ ಸಾಲ್ಮರ ಕೊಟೇಚಾ ಹಾಲ್ ನಲ್ಲಿ ನಡೆಯಲಿದೆ.
ಮಧ್ಯಾಹ್ನ 3 ಗಂಟೆಗೆ ನಡೆಯುವ ಸಭೆಯ ಅಧ್ಯಕ್ಷತೆಯನ್ನು ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಮಾರ್ತ ವಹಿಸಲಿದ್ದು, ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಉಪಸ್ಥಿತರಿರುವರು. ವಾಗ್ಮಿ ಶ್ರೀಕೃಷ್ಣ ಉಪಾಧ್ಯಾಯ ಸಂಘಟನಾ ಸಂದೇಶ ನೀಡುವರು.
ಸಮಾವೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಪುತ್ತಿಲ ಪರಿವಾರ ಪ್ರಕಟಣೆಯಲ್ಲಿ ತಿಳಿಸಿದೆ.